ಕಲ್ಲಡ್ಕ

ಬೋಳಂತೂರು ಗುಂಡಿಮಜಲು ರಸ್ತೆಗೆ ಗುದ್ದಲಿಪೂಜೆ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕು ಬೋಳಂತೂರು ಗ್ರಾಮದ ಬೊಳಂತೂರು ಗುಂಡಿಮಜಲು ರಸ್ತೆಗೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ, ಮಾಣಿ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾವೆ ಗುದ್ದಲಿ ಪೂಜೆ ನೆರವೇರಿಸಿದರು.

ಶಾಸಕರಾದ ರಾಜೇಶ್ ನಾಯ್ಕ್ ಈ ರಸ್ತೆಗೆ 10 ಲಕ್ಷಗಳ ವಿಶೇಷ ಅನುದಾನವನ್ನು ನೀಡಿದ್ದು, ಗ್ರಾಮಸ್ಥರ ಪರವಾಗಿ ಅವರಿಗೆ ಅಭಿನಂಧನೆ ಸಲ್ಲಿಸಲಾಯಿತು.

ಈ ಸಂದರ್ಭ ವಿಟ್ಲ ಕ್ಷೇತ್ರದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿಯ ಅಧ್ಯಕ್ಷರಾದ ದೇವಪ್ಪ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಬೋಳಂತೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಜಯರಾಮ ರೈ, ಗೋಳ್ತಮಜಲು ಜಿಲ್ಲಾ ಪಂಚಾಯಿತ್ ಸದಸ್ಯೆ ಕಮಲಾಕ್ಷಿ ಪೂಜಾರಿ, ಎಪಿಎಂಸಿ ಅಧ್ಯಕ್ಷರಾದ ನೇಮಿರಾಜ್ ರೈ,ಗೋಳ್ತಮಜಲು  ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಯಶೋಧರ ಕರ್ಬೆಟ್ಟು, ತಾಲೂಕು ಪಂಚಾಯತ್ ಸದಸ್ಯರಾದ ನಾರಾಯಣ ಶೆಟ್ಟಿ ಕುಳ್ಯಾರು, ಬೂತ್  ಅಧ್ಯಕ್ಷರಾದ ಚೆನ್ನಪ್ಪ ಪೂಜಾರಿ ಗುಂಡಿಮಜಲು, ಚಂದ್ರಶೇಖರ ಪೂಜಾರಿ ಮಾಡದಡಿ, ಬೂತ್ನ ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ದೆಯ್ಯಂದಹಿತ್ಲು, ಎಸ್ಸಿ ಮೋರ್ಚಾದ ಉಪಾಧ್ಯಕ್ಷರಾದ ಶೋಭಾ ಕೊಕ್ಕಪುಣಿ, ಬೂತ್ ಉಪಾಧ್ಯಕ್ಷರಾದ ಸುಂದರಿ, ಜಯರಾಮ ಶೆಟ್ಟಿ ಬೋಳಂತೂರು ಗುತ್ತು, ಆಶಾಲತಾ ಚೆನ್ನಪ್ಪ ಪೂಜಾರಿ ಗುಂಡಿ ಮಜಲು,ಬಾಬು ಪೂಜಾರಿ ಗುಂಡಿಮಜಲು,ರಮೇಶ್ ಪೂಜಾರಿ ಗುಂಡಿಮಜಲು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts