ಸಮಾಜದಲ್ಲಿರುವ ನ್ಯೂನತೆ, ಅಸಮಾನತೆಯ ವಿರುದ್ಧ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಸ್ಪೂರ್ತಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಅಧಿಕಾರಿಗಳು ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆಗಳನ್ನು ಮನನ ಮಾಡಿಕೊಂಡು ಸಮಾಜದಲ್ಲಿರುವ ಅಸಮಾನತನೆಯನ್ನು ಹೋಗಲಾಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು ಮಾತನಾಡಿ, ಕೊವೀಡ್‍ನಿಂದಾಗಿ ಜನರ ಜೀವನ ಶೈಲಿ ಬದಲಾಗಿದ್ದು, ಇಡೀ ಜಗತ್ತೇ ಸರಳತೆಯ ಕಡೆಗೆ ಸಾಗುತ್ತಿದೆ, ಬ್ರಹ್ಮಶ್ರೀ ನಾರಾಯಣ ಗುರುಗಳು ಹಲವು ವರ್ಷಗಳ ಹಿಂದೆಯೇ ಸರಳತೆಯ ತತ್ವವನ್ನು ಪ್ರತಿಪಾದಿಸಿದ್ದರು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪ ಮತ್ತಿತರರು ಉಪಸ್ಥಿತರಿದ್ಧರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು.
Be the first to comment on "ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶ ಸ್ಫೂರ್ತಿದಾಯಕ, ಇಂದಿಗೂ ಪ್ರಸ್ತುತ: ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ"