ಬಂಟ್ವಾಳ

5 ಲಕ್ಷವರೆಗಿನ ಸಿವಿಲ್ ಕಾಮಗಾರಿಗೆ ತುಂಡುಗುತ್ತಿಗೆ ಮುಂದುವರೆಸುವ ಕುರಿತು ಸರ್ಕಾರ ಆದೇಶ: ಶಾಸಕ ರಾಜೇಶ್ ನಾಯ್ಕ್

ಜಾಹೀರಾತು

ಬಂಟ್ವಾಳ: 5 ಲಕ್ಷವರೆಗಿನ ಸಿವಿಲ್ ಕಾಮಗಾರಿಗೆ ತುಂಡುಗುತ್ತಿಗೆ ಮುಂದುವರೆಸುವ ಕುರಿತು ಸರ್ಕಾರ ಆದೇಶ ಹೊರಡಿಸಿದ್ದಾಗಿ ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದು, ಈ ಕುರಿತು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಪರವಾಗಿ ಅವರಿಗೆ ಅಭಿನಂದಿಸುವುದಾಗಿ ತಾಪಂ ಸದಸ್ಯ ಪ್ರಭಾಕರ ಪ್ರಭು ಹೇಳಿದ್ದಾರೆ.

ಜಾಹೀರಾತು

ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯತ್, ತಾಲೂ ಪಂಚಾಯತ್ ,ಗ್ರಾಮ ಪಂಚಾಯತ್ ಗಳ ಅಭಿವೃದ್ಧಿ ಕಾಮಗಾರಿಗಳು  ಕೊರೊನಾ ಸಮಸ್ಯೆಯಿಂದ  ತುಂಡು ಗುತ್ತಿಗೆ ಮಾಡಲಾಗದೇ ತುಂಡು ಗುತ್ತಿಗೆ ಅವಧಿ ಮೀರಿರುವುದರಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸರ್ಕಾರದ ಮಟ್ಟದಲ್ಲಿ ಇತರ ಸಚಿವರು, ಅಧಿಕಾರಿಗಳಲ್ಲಿ ಮಾಡಿಸಿಕೊಂಡು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯಿಂದ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಕೈಗೊಳ್ಳುವ ಸಿವಿಲ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರೂ.5 ಲಕ್ಷ  ವರೆಗಿನ  ಕಾಮಗಾರಿಗಳನ್ನು ನೋಂದಾಯಿತ ಗುತ್ತಿಗೆದಾರರಿಂದ ತುಂಡು ಗುತ್ತಿಗೆ ಮೂಲಕ ಅನುಷ್ಠಾನ ಮಾಡುವ ಬಗ್ಗೆ ಸರ್ಕಾರದ  ಅದೇಶ ಹೊರಡಿಸಲು ಪ್ರಯತ್ನ ಮಾಡಿದವರಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮುಂಚೂಣಿಯ ಪಾತ್ರ ವಹಿಸಿದ್ದಾರೆ ಎಂದವರು ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ