ಪೆಟ್ರೋಲ್ ಬಂಕ್ ಶಟರ್ ಬೀಗ ಮುರಿದು ನಗದು ಕಳವು

ಜಾಹೀರಾತು

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ, ದೈಕಿನಕಟ್ಟೆ ಎಂಬಲ್ಲಿರುವ ಭಾರತ್‌ ಪೆಟ್ರೋಲಿಯಂ ಕಂಪೆನಿಯ ಪೆಟ್ರೋಲ್‌ ಬಂಕ್‌ನ ಶಟರ್ ಮುರಿದು ಒಳ ಪ್ರವೇಶಿಸಿದ ಕಳ್ಳರು ಮೇಜಿನ ಡ್ರಾಯರ್ ನಲ್ಲಿಟ್ಟಿದ್ದ ವ್ಯವಹಾರದ 1,21,344 ರೂ ನಗದನ್ನು ಕಳವು ಮಾಡಿದ್ದಾರೆ.

ಶುಕ್ರವಾರ ಬೆಳಗ್ಗಿನ ಜಾವ 5.30 ರ ವೇಳೆಗೆ ಪೆಟ್ರೋಲ್ ಬಂಕ್ ನ ನೌಕರ ಕೆಲಸಕ್ಕೆ ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದ್ದು,ತಕ್ಷಣ ಬಂಕ್ ನ ಮೆನೇಜರ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಕಳ್ಳರು ಪೆಟ್ರೋಲ್ ಬಂಕ್ ನ ಶಟರ್ ನ ಬೀಗ ಮುರಿದು ಒಳಗಡೆ ಗಾಜನ್ನು ಒಡೆದು ಒಳನುಗ್ಗಿ ಮೇಜಿನ ಡ್ರಾಯರ್ ನಲ್ಲಿ ಎರಡು ಬ್ಯಾಗಿನಲ್ಲಿರಿಸಲಾಗಿದ್ದ ಗುರುವಾರ ಇಡೀದಿನ ನಡೆದ ವ್ಯವಹಾರದ ನಗದು ಹಣ 1,21,344 ರೂ.ವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಬಂಕ್ ನ ಮೆನೇಜರ್  ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸುದ್ದಿ ತಿಳಿದ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್.ಐ.ಸೌಮ್ಯ  ಮತ್ತವರ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪೆಟ್ರೋಲ್ ಬಂಕ್ ಶಟರ್ ಬೀಗ ಮುರಿದು ನಗದು ಕಳವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*