ಬಾಕಿ ಪಿಂಚಣಿ ಹಣ ತಕ್ಷಣ ನೀಡಿ: ಎಸ್.ಡಿ.ಪಿ.ಐಯಿಂದ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ಪಿಂಚಣಿದಾರರಿಗೆ ಸಂಬಂಧಿಸಿದ ಸಮಸ್ಯೆಯನ್ನು ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನ ಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಧ್ಯಕ್ಷತೆಯನ್ನು ಕ್ಷೇತ್ರ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮಾತನಾಡಿ, ರಾಜ್ಯದಲ್ಲಿ ವೃದ್ಯಾಪ್ಯ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ ,ಸಂಧ್ಯಾ ಸುರಕ್ಷಾ ಹೀಗೆ ಅನೇಕ ಯೋಜನೆಯಡಿಯಲ್ಲಿ ಆರ್ಥಿಕ ಸಹಾಯ ಪಡೆಯುತಿರುವ ಪಿಂಚಣಿದಾರರಿಗೆ ಕಳೆದ ಏಳೆಂಟು ತಿಂಗಳಿಂದ ಪಿಂಚಣಿ ಹಣ ಸಂದಾಯವಾಗಿಲ್ಲ. ಈ ಕಾರಣ ಪಿಂಚಣಿದಾರರ ಜೀವನಕ್ಕೆ ತೊಂದರೆಯಾಗಿದೆ ಎಂದವರು ಹೇಳಿದರು. ಸಭೆಯನ್ನು ಉದ್ದೇಶಿಸಿ ಎಸ್ ಡಿಪಿಐ ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯ ಮೊಹಮ್ಮದ್ ಕಡಂಬು  ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್ ಎಚ್, ಬಂಟ್ವಾಳ ಕ್ಷೇತ್ರ ಉಪಾಧ್ಯಕ್ಷರಾದ ಉಬೈದ್ ಬಂಟ್ವಾಳ,  ಕ್ಷೇತ್ರ ಕಾರ್ಯದರ್ಶಿ ಗಳಾದ ಖಲಂದರ್ ಪರ್ತಿಪಾಡಿ,  ಸಲೀಂ ಅಲಾಡಿ ಮಲಿಕ್ ಕೊಳಕೆ ಉಪಸ್ಥಿತರಿದ್ದರು.

 

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಾಕಿ ಪಿಂಚಣಿ ಹಣ ತಕ್ಷಣ ನೀಡಿ: ಎಸ್.ಡಿ.ಪಿ.ಐಯಿಂದ ಬಂಟ್ವಾಳದಲ್ಲಿ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*