ಬಂಟ್ವಾಳ: ಪಿಂಚಣಿದಾರರಿಗೆ ಸಂಬಂಧಿಸಿದ ಸಮಸ್ಯೆಯನ್ನು ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನ ಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಧ್ಯಕ್ಷತೆಯನ್ನು ಕ್ಷೇತ್ರ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮಾತನಾಡಿ, ರಾಜ್ಯದಲ್ಲಿ ವೃದ್ಯಾಪ್ಯ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ ,ಸಂಧ್ಯಾ ಸುರಕ್ಷಾ ಹೀಗೆ ಅನೇಕ ಯೋಜನೆಯಡಿಯಲ್ಲಿ ಆರ್ಥಿಕ ಸಹಾಯ ಪಡೆಯುತಿರುವ ಪಿಂಚಣಿದಾರರಿಗೆ ಕಳೆದ ಏಳೆಂಟು ತಿಂಗಳಿಂದ ಪಿಂಚಣಿ ಹಣ ಸಂದಾಯವಾಗಿಲ್ಲ. ಈ ಕಾರಣ ಪಿಂಚಣಿದಾರರ ಜೀವನಕ್ಕೆ ತೊಂದರೆಯಾಗಿದೆ ಎಂದವರು ಹೇಳಿದರು. ಸಭೆಯನ್ನು ಉದ್ದೇಶಿಸಿ ಎಸ್ ಡಿಪಿಐ ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯ ಮೊಹಮ್ಮದ್ ಕಡಂಬು ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್ ಎಚ್, ಬಂಟ್ವಾಳ ಕ್ಷೇತ್ರ ಉಪಾಧ್ಯಕ್ಷರಾದ ಉಬೈದ್ ಬಂಟ್ವಾಳ, ಕ್ಷೇತ್ರ ಕಾರ್ಯದರ್ಶಿ ಗಳಾದ ಖಲಂದರ್ ಪರ್ತಿಪಾಡಿ, ಸಲೀಂ ಅಲಾಡಿ ಮಲಿಕ್ ಕೊಳಕೆ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…