ಮಂಗಳೂರು: ಮೌಲ್ಯಾಧಾರಿತ ಶಿಕ್ಷಣ ಇಂದಿನ ಆವಶ್ಯಕತೆ. ಅದಕ್ಕೆ ಶಿಕ್ಷಕರೇ ಶಿಲ್ಪಿಗಳು. ವಿದ್ಯಾರ್ಥಿಗಳನ್ನು ಪರಿಪೂರ್ಣ ವ್ಯಕ್ತಿ, ಶಕ್ತಿಯಾಗಿಸುವ ಶಿಕ್ಷಕ ವೃತ್ತಿ ಶ್ರೇಷ್ಠವಾದುದು ಎಂದು ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಸೇವಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್ ಹೇಳಿದರು.
ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಪಿಯು ಕಾಲೇಜು ವತಿಯಿಂದ ಶಂಕರಶ್ರೀ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಇದೇ ಸಂದರ್ಭ ಸುರತ್ಕಲ್ ಗೋವಿಂದದಾಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಶಿವಶಂಕರ ಭಟ್ ಅವರನ್ನು ಸಮ್ಮಾನಿಸಲಾಯಿತು. ಆಡಳಿತಾಽಕಾರಿ ಪ್ರೊ.ಕೆ.ಶಂಕರ ಭಟ್, ಶ್ರೀ ಭಾರತೀ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ.ಜೀವನ್ದಾಸ್, ನಿವೃತ್ತ ಪ್ರಾಂಶುಪಾಲ ಯು.ಎಸ್.ವಿಶ್ವೇಶ್ವರ ಭಟ್, ಸಂಸ್ಥೆಯ ಸೇವಾ ಸಮಿತಿ ಕಾರ್ಯಾಧ್ಯಕ್ಷ ಗಣೇಶಮೋಹನ ಕಾಶಿಮಠ, ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ, ಜತೆಕಾರ್ಯದರ್ಶಿ ಎಂ.ಟಿ.ಭಟ್ ಉಪಸ್ಥಿತರಿದ್ದರು. ಇದೇ ಸಂದರ್ಭ ಶಿಕ್ಷಕರನ್ನು ಮತ್ತು ಅತಿಥಿಗಳನ್ನು ತುಳಸಿ ಗಿಡ ನೀಡಿ ಗೌರವಿಸಲಾಯಿತು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ವಿದ್ಯಾ ಭಟ್ ಸ್ವಾಗತಿಸಿ, ಪ್ರಾಧ್ಯಾಪಕ ಅನಂತನಾರಾಯಣ ಪದಕಣ್ಣಾಯ ನಿರೂಪಿಸಿದರು. ಹಿರಿಯ ಶಿಕ್ಷಕಿ ಸುಭದ್ರಾ ಭಟ್ ವಂದಿಸಿದರು.