ಪ್ರಮುಖ ಸುದ್ದಿಗಳು

ಕಲಾಪೋಷಕ ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಇನ್ನಿಲ್ಲ

ಜಾಹೀರಾತು

ಕಾಸರಗೋಡು: ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ (79 ವರ್ಷ) ಶನಿವಾರ ಮಧ್ಯರಾತ್ರಿ ಎಡನೀರು ಮಠದಲ್ಲಿ ವಿಧಿವಶರಾದರು. ಸೆ.2ರಂದು ಚಾತುರ್ಮಾಸ್ಯವನ್ನು ಪೂರೈಸಿದ್ದ ಶ್ರೀಗಳು ಕಳೆದ ಕೆಲವು ದಿನಗಳಿಂದ ಅಲ್ಪ ಅಸೌಖ್ಯದಲ್ಲಿದ್ದರು. ಶನಿವಾರ ರಾತ್ರಿ ಪೂಜೆ ಮುಗಿಸಿ ಫಲಾಹಾರ ಸ್ವೀಕರಿಸಿದ್ದ ಶ್ರೀಗಳು ಮಧ್ಯರಾತ್ರಿಯ ವೇಳೆ ಅಸ್ತಂಗತರಾಗಿದ್ದಾರೆ. 1960ರಿಂದ ಎಡನೀರು ಮಠಾಧಿಶರಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದ ಅವರು ಸಂಗೀತ, ಯಕ್ಷಗಾನ, ಶಿಕ್ಷಣ, ಪ್ರವಾಸೋದ್ಯಮ ಸಹಿತ ಧಾರ್ಮಿಕ  ಕ್ಷೇತ್ರಗಳಲ್ಲಿ ಕಾಸರಗೋಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಠದ ಮೂಲಕ ಕೊಡುಗೆ ನೀಡಿದ್ದರು. ಕಾಸರಗೋಡಿನಲ್ಲಿ ಕನ್ನಡ ಸಂಸ್ಕೃತಿಯ ಕೇಂದ್ರವಾಗಿ ಎಡನೀರು ಗುರುತಿಸಲ್ಪಟ್ಟಿತ್ತು.

ಯಕ್ಷಗಾನದ ಮೇಲೆ ಅತೀವ ಆಸಕ್ತಿ ಹೊಂದಿದ್ದ ಶ್ರೀಗಳು ಯಕ್ಷಗಾನ ಮೇಳವನ್ನು ಕಟ್ಟಿ ನೂರಾರು ಕಲಾವಿದರ ಪೋಷಕರಾಗಿದ್ದರು. ಸ್ವತಃ ಭಾಗವತರಾಗಿ ಯಕ್ಷಗಾನ ರಂಗಸ್ಥಳದಲ್ಲಿ ಮಿಂಚಿದ್ದ ಎಡನೀರು ಶ್ರೀಗಳು ಸಂಗೀತ, ನೃತ್ಯ ಕಲಾರಾಧನೆಗೂ ಪ್ರೋತ್ಸಾಹ ನೀಡುತ್ತಿದ್ದರು.

ಜಾಹೀರಾತು

ಶ್ರೀಗಳು, ಪ್ರತೀ ವರ್ಷ ಯಕ್ಷಗಾನ ಸಪ್ತಾಹ, ತಾಳಮದ್ದಳೆ ಕೂಟಗಳನ್ನು ನಡೆಸುತ್ತಿದ್ದರು.ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಶವಾನಂದ ಸ್ವಾಮೀಜಿಯವರ ಹೆಸರು ಚಿರಸ್ಥಾಯಿಯಾಗಿದೆ. ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ ಭಾರಿ ಪ್ರಸಿದ್ಧಿ ಪಡೆದಿತ್ತು. ದೇಶದಲ್ಲಿ ಸಂಚಲನ ಉಂಟು ಮಾಡಿದ್ದ ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ