ಬಂಟ್ವಾಳ: ಬಿಜೆಪಿಯ ಅಮ್ಟೂರು ಗ್ರಾಮದ 182ನೇ ಬೂತ್ ಸಮಿತಿ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ನ ಕಾರ್ಡ್ ಉಚಿತ ನೋಂದಣಿ ಕಾರ್ಯಕ್ರಮ ಅಮ್ಟೂರು ಶ್ರೀಕೃಷ್ಣ ಭಜನಾ ಮಂದಿರ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯ ಕಾಪಾಡುವ ಕುರಿತು ನಮ್ಮ ಗಮನ ಇರಬೇಕು, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಾಕಿಕೊಟ್ಟ ಯೋಜನೆಗಳ ಅನುಷ್ಠಾನ ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.
ಕಿಯೋನಿಕ್ಸ್ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಸ್ವಾತಂತ್ರ್ಯ ಬಂದ ನಂತರ ಈ ದೇಶದಲ್ಲಿ ಹಲವಾರು ಪ್ರಧಾನ ಮಂತ್ರಿಗಳು ಬಂದು ಹೋದರು ಆದರೆ ಈಗಿನ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಮಾಡಿದ ಅಭಿವೃದ್ಧಿ ಕಾರ್ಯಗಳು ಅನನ್ಯ ಎಂದರು. ಗೋಳ್ತಮಜಲು ಜಿಲ್ಲಾ ಪಂಚಾಯಿತಿ ಸದಸ್ಯರಾದ ಕಮಲಾಕ್ಷಿ ಪೂಜಾರಿ, ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಆನಂದ ಎ. ಶಂಭೂರು, ಬಿಜೆಪಿ ಪ್ರಮುಖರಾದ ಮೋನಪ್ಪ ದೇವಸ್ಯ, ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಮನಾಥ ರಾಯಿ, ಪ್ರಧಾನ ಕಾರ್ಯದರ್ಶಿಯಾದ ಯಶೋಧರ ಕರ್ಬೆಟ್ಟು, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಲಕ್ಷ್ಮೀ ಪ್ರಭು, ಬೂತ್ ಸಮಿತಿ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಬೈದರಡ್ಕ, ಶ್ರೀಕೃಷ್ಣ ಭಜನಾ ಮಂದಿರ ಅಮ್ಟೂರು ಅಧ್ಯಕ್ಷ ರಮೇಶ್ ಶೆಟ್ಟಿಗಾರ್, ಎಸ್ಸಿ ಮೋರ್ಚಾ ಜಿಲ್ಲಾ ಸದಸ್ಯಕೃಷ್ಣಪ್ಪ, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಗೋಪಾಲಕೃಷ್ಣ ಪೂವಳ, ಗೋಪಾಲ ಪೂಜಾರಿ, ಜಯಂತ ಗೌಡ, ಬೂತ್ ಸಮಿತಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಶೆಟ್ಟಿಗಾರ್, ಉಪಾಧ್ಯಕ್ಷರಾದ ನಿತಿನ್ ಕುಲಾಲ್, ಕಾರ್ಯದರ್ಶಿ ಜಿತೇಶ್ ಶೆಟ್ಟಿ ಬಾಳಿಕೆ, ಪುರುಷೋತ್ತಮ ಪೂಜಾರಿ ಶಾಂತಿಪಾಲಿಕೆ, ಪುರುಷೋತ್ತಮ ಟೈಲರ್, ದೇವಕಿ, ದಿವಾಕರ ಪೂಜಾರಿ. ಇಂದಿರಾ ರೈ. ಕಾಂತಪ್ಪ ಶೆಟ್ಟಿ ಬಾಳಿಕೆ. ದೇವದಾಸ್ ಕೃಷ್ಣಾಪುರ. ವಾಸುದೇವ ಶೆಟ್ಟಿಗಾರ್ .ಹರೀಶ್ ಬಟ್ಟೆಹಿತ್ಲು. ರತಿನ್ ಕುಮಾರ್. ಕುಶಾಲಪ್ಪ ಶ್ರೀಮಾನ್. ವಿಖ್ಯಾತ್ ಶೆಟ್ಟಿ. ಬಜರಂಗ ದಳದ ಸಂಚಾಲಕರಾದ ಕೌಶಲ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಸದಸ್ಯರು, ಭಾರತೀಯ ಜನತಾ ಪಾರ್ಟಿಯ 182 ಬೂತ್ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಅತಿಥಿಗಳನ್ನು ಗೌರವಿಸಿದ ತಾಪಂ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು ಕುಶಾಲಪ್ಪ ಅಮ್ಟೂರು ವಂದಿಸಿದರು.