ಬಂಟ್ವಾಳ: ಗ್ರಾ.ಪಂ.ಗಳ 14ನೇ ಹಣಕಾಸು ಯೋಜನೆಯ ಕಾಮಗಾರಿಗಳನ್ನು 15 ದಿನಗಳೊಳಗೆ ಮುಗಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಪಿಡಿಒ ಮತ್ತು ಆಡಳಿತಾಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಪಂ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಕ್ಷೇತ್ರ ವ್ಯಾಪ್ತಿಯ ಗ್ರಾ.ಪಂ.ಗಳ ಪಿಡಿಒಗಳು ಹಾಗೂ ಆಡಳಿತಾಧಿಕಾರಿಗಳ ಸಭೆ ನಡೆಸಿದ ಅವರು ಸಲಹೆ ಸೂಚನೆಗಳನ್ನು ನೀಡಿದರು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ತಾರಾನಾಥ ಸಾಲ್ಯಾನ್ ಅವರಿಗೆ ಕಾರ್ಯನಿರ್ವಹಣೆಯ ಕುರಿತು ಹಲವು ಸಲಹೆ ಸೂಚನೆಗಳನ್ನು ಶಾಸಕರು ನೀಡಿದರು. ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "14ನೇ ಹಣಕಾಸು ಯೋಜನೆ ಕಾಮಗಾರಿ 15 ದಿನದೊಳಗೆ ಮುಗಿಸಿ: ಶಾಸಕ ರಾಜೇಶ್ ನಾಯ್ಕ್ ನೀಡಿದರು ಗಡುವು"
Be the first to comment on "14ನೇ ಹಣಕಾಸು ಯೋಜನೆ ಕಾಮಗಾರಿ 15 ದಿನದೊಳಗೆ ಮುಗಿಸಿ: ಶಾಸಕ ರಾಜೇಶ್ ನಾಯ್ಕ್ ನೀಡಿದರು ಗಡುವು"