ಬಂಟ್ವಾಳ

ಅಪಾರ ಪ್ರಮಾಣದ ಗಾಂಜಾ ದಾಸ್ತಾನು ಪತ್ತೆ: ಬಂಟ್ವಾಳ ಪೊಲೀಸರ ಕಾರ್ಯಾಚರಣೆಯಲ್ಲಿ ಆರೋಪಿ ವಶಕ್ಕೆ

 

ಜಾಹೀರಾತು

ಬಿ.ಸಿ.ರೋಡ್ ಸಮೀಪ ಬಿ.ಮೂಡ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ಗಾಂಜಾ ದಾಸ್ತನಿಟ್ಟಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು  ವಶಕ್ಕೆ ತೆಗೆದುಕೊಂಡಿದ್ದಾರೆ. ಈತನಿಂದ ಸುಮಾರು 39 ಕೆ ಜಿ 948 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅಹಮದ್ ಸಾಬೀತ್ ಎಂಬಾತ ಈ ಆರೋಪದಲ್ಲಿ ಪೊಲೀಸ್ ವಶದಲ್ಲಿರುವಾತ. ಮತ್ತೋರ್ವ ಪರಾರಿಯಾಗಿದ್ದಾನೆ. ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳವಾರ ಮಧ್ಯಾಹ್ನ ಈ ದಾಳಿ ನಡೆದಿದೆ. ಮನೆಯಲ್ಲಿ ಎರಡು ಪಾಲಿಥೀನ್ ಚೀಲಗಳಲ್ಲಿ  ಮಾದಕ ಗಾಂಜ ಗಿಡದ ಮೊಗ್ಗು, ಎಲೆ , ಕಡ್ಡಿಗಳು ಇದ್ದು ಅವು ಅರೆ ಒಣಗಿದ್ದು ಸೇರಿದಂತೆ ರೂ.19,97,400 ಮೌಲ್ಯದ ಒಟ್ಟು ತೂಕ 39 ಕೆ ಜಿ 948 ಗ್ರಾಮ್ ಗಾಂಜಾ ಪತ್ತೆಯಾಗಿದೆ. ಎಸ್.ಐ.ಅವಿನಾಶ್ ದಾಳಿ ನಡೆಸಿದ್ದು, ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಮಾರ್ಗದರ್ಶನ ನೀಡಿದ್ದರು. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಠಾಣಾ ವ್ಯಾಪ್ತಿಯಲ್ಲೂ ಗಾಂಜಾ ಸೇವನೆ ಮತ್ತು ಗಾಂಜಾ ಹೊಂದಿದ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ