ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಯಲ್ಲಿ ಉಪತಹಶೀಲ್ದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇತ್ತೀಚೆಗೆ ನಿಧನರಾದ ಶ್ರೀಧರ್ ಅವರಿಗೆ ಬಂಟ್ವಾಳ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಕಚೇರಿ ಸಿಬ್ಬಂದಿ ಮೌನ ಪ್ರಾರ್ಥನೆ ಮತ್ತು ಪುಷ್ಪ ನಮನದೊಂದಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಸಮರ್ಪಿಸಿದರು.
ಈ ಸಂದರ್ಭ ಮಾತನಾಡಿದ ತಹಶೀಲ್ದಾರ್ ರಶ್ಮಿ ಎಸ್ ಆರ್, ಎಲ್ಲರೊಂದಿಗೂ ನಗು ನಗುತ್ತಾ ಬೆರೆಯುತ್ತಿದ್ದ ಉಪತಹಶೀಲ್ದಾರರ ಅನಿರೀಕ್ಷಿತ ಅಗಲಿಕೆ ಎಲ್ಲರಿಗೂ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಲ್ಲರಿಗೂ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಹೇಳಿದರು. ತಾಲೂಕು ಕಚೇರಿ ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಸಿಬ್ಬಂದಿಗಳು, ಗ್ರಾಮಕರಣಿಕರು, ಗ್ರಾಮ ಸಹಾಯಕರು ಈ ವೇಳೆ ಉಪಸ್ಥಿತರಿದ್ದು, ಅಗಲಿದ ಸಹೋದ್ಯೋಗಿಗೆ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಭಾವುಕರಾದರು. ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರ್ವಹಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ಉಪತಹಸೀಲ್ದಾರ್ ಶ್ರೀಧರ್ ಕೋಡಿಜಾಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ"
Be the first to comment on "ಬಂಟ್ವಾಳ ಉಪತಹಸೀಲ್ದಾರ್ ಶ್ರೀಧರ್ ಕೋಡಿಜಾಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ"