ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ಮೊಂತಿ ಫೆಸ್ಟ್ ಸರಳ ಆಚರಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್ ) ತೆನೆಹಬ್ಬ ವನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು.

ಚರ್ಚ್ ಧರ್ಮಗುರುಗಳಾದ ವಂ. ಫ್ರಾನ್ಸಿಸ್ ಕ್ರಾಸ್ತ ಅವರು, ವಂ. ರೊಯ್ಸ್ಟನ್ ಮತ್ತು ಭಕ್ತರೊಂದಿಗೆ ಬಲಿಪೂಜೆಯನ್ನು ಅರ್ಪಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್  ಆದೇಶದಂತೆ ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುವುದನ್ನು ರದ್ದುಪಡಿಸಲಾಗಿತ್ತು. ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿಯಿಂದ, ಸಾಮಾಜಿಕ ಅಂತರದಿಂದ ಪಾಲ್ಗೊಳ್ಳಲು ಬೇಕಾದ ಆಸನದ ವ್ಯವಸ್ಥೆಯನ್ನು ಚರ್ಚ್ ವಠಾರದಲ್ಲಿ ಆಯೋಜಿಸಿ, ಎಲ್ ಇ ಡಿ ಪರದೆಯನ್ನು ಅಳವಡಿಸಲಾಯಿತು. ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು. ಬಲಿ ಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಉಪಹಾರ , ಹಾಗೂ ಕಬ್ಬನ್ನು ನೀಡಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು. ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳನ್ನು ಚರ್ಚ್ ವತಿಯಿಂದ ಸನ್ಮಾನಿಸಲಾಯಿತು. ಚರ್ಚ್ ಪಾಲನಾ ಮಂಡಳಿ ಸಂಭ್ರಮದ ನೇತೃತ್ವ ವಹಿಸಿದ್ದರು. ಧರ್ಮಗುರುಗಳು  ಸಹಕರಿಸಿದ ಎಲ್ಲರನ್ನೂ ಸ್ಮರಿಸಿ ವಂದಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ಮೊಂತಿ ಫೆಸ್ಟ್ ಸರಳ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*