ಮಂಗಳೂರು: ಮಂಗಳೂರಿನಿಂದ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಾಹನ ಸಮೇತ ಉಳ್ಳಾಲ ಠಾಣಾ ಸಿಬ್ಬಂದಿ ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ವಾಹನ ತಪಾಸಣೆ ಮಾಡುವ ವೇಳೆ ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದರು. ಬಂದ್ಯೋಡು ಮಂಗಳಪಾಡಿ ನಿವಾಸಿ ರೆಜಿನ್ (23) ಹಾಗೂ ಮಂಗಳಪಾಡಿ ಶಿರಿಯಾ ನಿವಾಸಿ ಧೀರಜ್ (21) ಬಂಧಿತರು. ದಕ್ಷಿಣ ಪೊಲೀಸ್ ಉಪವಿಭಾಗದ ಎಸಿಪಿ ನಿರ್ದೇಶನದಂತೆ ಉಳ್ಳಾಲ ಠಾಣಾಧಿಕಾರಿ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಿ, 26 ಬಾಕ್ಸ್ಗಳಲ್ಲಿದ್ದ 225 ಲೀ. ಮದ್ಯ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕೇರಳಕ್ಕೆ ಮದ್ಯ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ"
Be the first to comment on "ಕೇರಳಕ್ಕೆ ಮದ್ಯ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ"