ಮಂಗಳೂರು: ಮಂಗಳೂರಿನಿಂದ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಾಹನ ಸಮೇತ ಉಳ್ಳಾಲ ಠಾಣಾ ಸಿಬ್ಬಂದಿ ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ವಾಹನ ತಪಾಸಣೆ ಮಾಡುವ ವೇಳೆ ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದರು. ಬಂದ್ಯೋಡು ಮಂಗಳಪಾಡಿ ನಿವಾಸಿ ರೆಜಿನ್ (23) ಹಾಗೂ ಮಂಗಳಪಾಡಿ ಶಿರಿಯಾ ನಿವಾಸಿ ಧೀರಜ್ (21) ಬಂಧಿತರು. ದಕ್ಷಿಣ ಪೊಲೀಸ್ ಉಪವಿಭಾಗದ ಎಸಿಪಿ ನಿರ್ದೇಶನದಂತೆ ಉಳ್ಳಾಲ ಠಾಣಾಧಿಕಾರಿ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಿ, 26 ಬಾಕ್ಸ್ಗಳಲ್ಲಿದ್ದ 225 ಲೀ. ಮದ್ಯ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)