ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಭೇಟಿಗೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಬಿ.ರಮಾನಾಥ ರೈ ಅವರ ಕಳ್ಳಿಗೆಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ಈ ಸಂದರ್ಭ ಪಕ್ಷ ನಾಯಕಿ ಸವಿತಾ ರಮೇಶ್, ಡಿಸಿಸಿ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)