ಬಂಟ್ವಾಳ

ಎಸ್ಸೆಸ್ಸೆಲ್ಸಿ ಮೌಲ್ಯಮಾಪನದಲ್ಲಿ ಎಡವಟ್ಟು: ಉತ್ತರಪತ್ರಿಕೆ ತಪ್ಪಾಗಿ ತಿದ್ದಿದವರ ವಿರುದ್ಧ ಕ್ರಮಕ್ಕೆ ಸಮಾನ ಮನಸ್ಕ ಸಂಘಟನೆಗಳ ಪಟ್ಟು

ಜಾಹೀರಾತು

ಬಂಟ್ವಾಳ: ಎಸೆಸೆಲ್ಸಿ ಉತ್ತರಪತ್ರಿಕೆ ಮೌಲ್ಯಮಾಪನದಿಂದ ಆಗಿರುವ ಅನಾಹುತಗಳ ಕುರಿತು ಸೂಕ್ತ ಕಾನೂನು ಕ್ರಮಕೈಗೊಳ್ಳುವ ಜತೆಗೆ ಮೌಲ್ಯಮಾಪಕರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ವತಿಯಿಂದ ಬಿ.ಸಿ.ರೋಡು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಮಾತನಾಡಿದ ಸಂಘಟನೆಯ ಸಹಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್, ಕೊರೊನಾ ಆತಂಕದ ಮಧ್ಯೆಯೂ ವಿದ್ಯಾರ್ಥಿಗಳು ಸಮರ್ಥವಾಗಿ ಪರೀಕ್ಷೆಯನ್ನು ಎದುರಿಸಿದ್ದು, ಆದರೆ ವಿದ್ಯಾರ್ಥಿಗಳ ಅನುತ್ತೀರ್ಣ ಪ್ರಮಾಣ ನೋಡುವಾಗ ಮೌಲ್ಯ ಲೋಪವಾಗಿರುವುದು ಮೇಲ್ನೋಟಕ್ಕೆ ಕಂಡುಬಂರುತ್ತಿದೆ. ಇದಕ್ಕೆ ನಿದರ್ಶನವೆಂಬಂತೆ ದ.ಕ., ಉಡುಪಿ ಜಿಲ್ಲೆಯಲ್ಲಿ ಸುಮಾರು 748 ವಿದ್ಯಾರ್ಥಿಗಳು ಮರು ಮೌಲ್ಯಮಾಪನದಲ್ಲಿ ಉತ್ತೀರ್ಣರಾಗಿರುವುದು ಮೌಲ್ಯಮಾಪಕರ ಬೇಜಾಬ್ದಾರಿಯನ್ನು ತೋರಿಸುತ್ತದೆ. ಹೀಗಾಗಿ ಮಾಪಕರ ಎಡವಟ್ಟಿನಿಂದ ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಇದಕ್ಕೆ ಸರಕಾರದ ಬೇಜವಾಬ್ದಾರಿಯೂ ಕಾರಣವಾಗಿದ್ದು, ಹೀಗಾಗಿ ಮೌಲ್ಯಮಾಪಕರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು. ನಮ್ಮ ಮನವಿಗೆ ಸರಕಾರ ಸ್ಪಂದನೆ ನೀಡದಿದ್ದರೆ, ಕಾನೂನು ಹೋರಾಟದ ಜತೆಗೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ಬಳಿಕ ಮೌಲ್ಯಮಾಪಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್.ಅವರ ಮೂಲಕ ರಾಜ್ಯ ಶಿಕ್ಷಣ ಸಚಿವರಿಗೆ ಮನವಿ ನೀಡಲಾಯಿತು.  ಪ್ರತಿಭಟನೆಯಲ್ಲಿ ಸಮಿತಿಯ ಅಧ್ಯಕ್ಷ ಬಿ.ಎಂ.ಪ್ರಭಾಕರ ದೈವಗುಡ್ಡೆ, ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ತುಂಬೆ, ಕಾರ್ಯದರ್ಶಿ ಬಿ.ಶೇಖರ್, ಪ್ರಮುಖರಾದ ಹಾರೂನ್ ರಶೀದ್, ಪ್ರೇಮನಾಥ ಕೆ, ಭಾರತಿ ಪ್ರಶಾಂತ್, ಸತೀಶ್ ಕುಮಾರ್, ಶ್ರೀನಿವಾಸ ಭಂಡಾರಿ, ಇಸ್ಮಾಯಿಲ್ ಕೆಳಗಿನಪೇಟೆ, ಶಾಫಿ ಕೆಳಗಿನಪೇಟೆ ಮೊದಲಾದವರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts