ಬಂಟ್ವಾಳ: ಬಂಟ್ವಾಳ ಕ್ಷೇತ್ರಕ್ಕೆ ತನ್ನ ಶಾಸಕತ್ವ ಅವಧಿಯಲ್ಲಿ ಪ್ರತಿ ಗ್ರಾಮಗಳಿಗೂ ಅನುದಾನ ನೀಡಲಾಗಿದೆ. ನಾಲ್ನೂರು ಕೋಟಿ ರೂಗಳಿಗಿಂತಲೂ ಅಧಿಕ ಅನುದಾನ ವಿನಿಯೋಗಿಸಿ ಅಭಿವೃದ್ಧಿ ಕಾರ್ಯ ನಡೆಸಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ನಡೆದ ಬಂಟ್ವಾಳ ಬಿ.ಜೆ.ಪಿ ಕ್ಷೇತ್ರ ಸಮಿತಿ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ, ಮಂಡಲ ಮಹಾಶಕ್ತಿಕೇಂದ್ರಗಳ ಪದಾಧಿಕಾರಿಗಳ ಹಾಗೂ ಜಿಲ್ಲೆಯಿಂದ ನೇಮಕಗೊಂಡಿರುವ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.
ಕೇಂದ್ರ ಸರಕಾರದ ಅನುದಾನವು ನೇರ ಪಂಚಾಯತಿಗಳಿಗೆ ಈಗಾಗಲೇ ಬಂದಿದ್ದು, ಮುಂದಿನ ದಿನದಲ್ಲಿ ವರ್ಷಕ್ಕೆ ಕೋಟಿ ಅನುದಾನ ಬರುವ ಯೋಜನೆಯಿದೆ ಎಂದರು.
ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರೆಲ್ಲ ಒಟ್ಟಾಗಿ ಚುನಾವಣೆ ಗೆಲ್ಲುವ ದೃಷ್ಠಿಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ ಅವರು, ಈ ಚುನಾವಣೆಯನ್ನು ಎಲ್ಲಾ ಪಂಚಾಯತ್ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.
ಚುನಾವಣಾ ಪೂರ್ವ ತಯಾರಿಯ ಬಗ್ಗೆ ಪೂರ್ಣ ಮಾಹಿತಿಯನ್ನು ಬಂಟ್ವಾಳದ ಮಂಡಲದ ಪಂಚಾಯತ್ ಚುನಾವಣಾ ಪ್ರಭಾರಿ ದೇವದಾಸ್ ಶೆಟ್ಟಿ ನೀಡಿದರು.
ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ರಾಜ್ಯ ಬಿಜೆಪಿ ನೀಡಿದ ಕಾರ್ಯಸೂಚಿಯ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಬಂಟ್ವಾಳ ಬಿಜೆಪಿ ಉಪಾಧ್ಯಕ್ಷ ಚಿದಾನಂದ ರೈ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Be the first to comment on "ತನ್ನ ಶಾಸಕತ್ವ ಅವಧಿಯಲ್ಲಿ ಪ್ರತಿ ಗ್ರಾಮಕ್ಕೂ ಅನುದಾನ: ರಾಜೇಶ್ ನಾಯ್ಕ್"