ವಿಶ್ವಕರ್ಮ ಶಿಲ್ಪ ಕಲೆಗಳ ದೇವರು. ನಮ್ಮ ಪುರಾಣಗಳಲ್ಲಿ ಬರುವ ಪ್ರಸಿದ್ಧ ನಗರಗಳ ನಿರ್ಮಾತೃ. ಲೋಕದ ಸೃಷ್ಟಿ ವಿಶ್ವಕರ್ಮರ ಕೆಲಸದಿಂದ ಆಯಿತು ಎಂಬ ಮಾತಿದೆ. ಆದ್ದರಿಂದ ಇವರು ಕ್ರಿಯಾಶೀಲ ಚಟುವಟಿಕೆಗಳ ಮೂಲ ಎನ್ನಬಹುದು ಬಂಟ್ವಾಳ ತಾಲೂಕು ಕಚೇರಿಯ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ ಹೇಳಿದರು.
ಗುರುವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸಾಂಕೇತಿಕವಾಗಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ ವಂದಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…