ಬಂಟ್ವಾಳ: ಕಳೆದ ಒಂದೂವರೆ ವರ್ಷದಿಂದ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶಿರಸ್ತೇದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಧಾಕೃಷ್ಣ. ಕೆ. (50) ಅವರು ಹೃದಯಾಘಾತದಿಂದ ಶನಿವಾರ ಮುಂಜಾನೆ ಬಿ.ಸಿ.ರೋಡಿನಲ್ಲಿ ನಿಧನ ಹೊಂದಿದರು. ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಗುವನ್ನು ಅವರು ಅಗಲಿದ್ದಾರೆ. ಮೂಲತಃ ಶಿರ್ತಾಡಿಯವರಾಗಿದ್ದ ಅವರು ಸಕಲೇಶಪುರದಲ್ಲಿ ಕರ್ತವ್ಯ ಸಲ್ಲಿಸಿ, ಬಳಿಕ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಬಳಿಕ ಹಾಸನದಿಂದ ಸಾಮಾಜಿಕ ಭದ್ರತೆ ವಿಭಾಗದ ಶಿರಸ್ತೇದಾರ್ ಆಗಿ ಕರ್ತವ್ಯಕ್ಕೆ ಭಡ್ತಿ ಹೊಂದಿ ಬಂಟ್ವಾಳ ತಾಲೂಕು ಕಚೇರಿಗೆ ಕಳೆದ ಒಂದೂವರೆ ವರ್ಷಗಳ ಹಿಂದೆ ಆಗಮಿಸಿದ್ದರು. ಅವರು ಕೇಂದ್ರ ಸ್ಥಾನೀಯ ಶಿರಸ್ತೇದಾರ್ ಆಗಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃದುಭಾಷಿಯಾಗಿದ್ದು, ಎಲ್ಲರೊಂದಿಗೆ ಬೆರೆಯುತ್ತಿದ್ದ ಅವರ ಅಂತಿಮ ದರ್ಶನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಸಹಾಯಕ ಕಮೀಷನರ್ ಮದನ್ ಮೋಹನ್, ತಹಸೀಲ್ದಾರ್ ರಶ್ಮಿ ಎಸ್.ಆರ್. ಸಹಿತ ಕಂದಾಯ ಇಲಾಖೆಯ ಎಲ್ಲ ಸಿಬ್ಬಂದಿ ವರ್ಗ, ಸರ್ಕಾರಿ ನೌಕರರ ಸಂಘದ ಸದಸ್ಯರು ಅಂತಿಮ ದರ್ಶನ ಪಡೆದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ತಾಲೂಕು ಕಚೇರಿ ಶಿರಸ್ತೇದಾರ್ ರಾಧಾಕೃಷ್ಣ ನಿಧನ"
Be the first to comment on "ಬಂಟ್ವಾಳ ತಾಲೂಕು ಕಚೇರಿ ಶಿರಸ್ತೇದಾರ್ ರಾಧಾಕೃಷ್ಣ ನಿಧನ"