ಬಂಟ್ವಾಳ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಕ್ಷೇತ್ರ ಬಿಜೆಪಿಯಿಂದ 18 ಸಾವಿರಕ್ಕೂ ಅಧಿಕ ಉಚಿತ ಆಯುಷ್ಮಾನ್ ಕಾರ್ಡ್ ವಿತರಣೆ

ಬಂಟ್ವಾಳ: ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಿಜೆಪಿ ಕ್ಷೇತ್ರ ಸಮಿತಿ ಮೂಲಕ ಸುಮಾರು 18 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಆಯುಷ್ಮಾನ್ ಕಾರ್ಡ್ ಗಳನ್ನು ಉಚಿತವಾಗಿ ವಿತರಿಸಲಾಗಿದೆ ಎಂದು ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಹೇಳಿದ್ದಾರೆ.

ಕರ್ಪೆ ಸಮಾಜಮಂದಿರದಲ್ಲಿ ಬಿಜೆಪಿಯ ಕ್ಷೇತ್ರ ಸಮಿತಿ, ಮಹಿಳಾ ಮೋರ್ಚಾ, ಯುವ ಮೋರ್ಚಾ ಮತ್ತು ಬೂತ್ ಸಮಿತಿ ವತಿಯಿಂದ ನಡೆದ ಆಯುಷ್ಮಾನ್  ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅದ್ಯಕ್ಷ ದೇವಪ್ಪ ಪೂಜಾರಿ ಮಾರ್ಗದರ್ಶನದಲ್ಲಿ ಪ್ರಧಾನಿ ಮೋದಿ ಅವರ ಜನ್ಮದಿನಾಚರಣೆಯ ಸೇವಾ ಸಪ್ತಾಹದ ಅಂಗವಾಗಿ ಕಾರ್ಯಕ್ರಮ ನಡೆಯುತ್ತಿದೆ ಎಂದವರು ಈ ಸಂದರ್ಭ ಹೇಳಿದರು.

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಚೌಟ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಯುವ ಮೋರ್ಚಾ ಕ್ಷೇತ್ರಾಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಮಹಿಳಾ ಮೋರ್ಚಾ ಪ್ರದಾನ ಕಾರ್ಯದರ್ಶಿ ಸೀಮಾ ಮಾಧವ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಮಂದಾರತಿ ಎಸ್.ಶೆಟ್ಟಿ, ಎ.ಪಿ.ಎಮ್.ಸಿ.ಮಾಜಿ ಸದಸ್ಯ ರತ್ನಕುಮಾರ್ ಚೌಟ, ಸಂಗಬೆಟ್ಟು ಗ್ರಾಮ ಪಂಚಾಯತಿ ನಿಕಟಪೂರ್ವ ಉಪಾಧ್ಯಕ್ಷ ಸತೀಶ್ ಪೂಜಾರಿ, ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ನಿರ್ದೇಶಕ ಉಮೇಶ್ ಗೌಡ ಮಂಚಕಲ್ಲು, ಕರ್ಪೆ ಬಿಜೆಪಿ ಬೂತ್ ಸಮಿತಿಯ ಅದ್ಯಕ್ಷರಾದ ನವೀನ ಪೂಜಾರಿ, ತೇಜಾಸ್ ಮರ್ದೊಟ್ಟು, ಗಣ್ಯರಾದ ಸುಬ್ರಹ್ಮಣ್ಯ ಭಟ್ ದೋಟ, ಹರೀಶ್ ಪೂಜಾರಿ ಶೆಟ್ಟಿಬೆಟ್ಟು,ರಂಜಿತ್ ಪೂವಳ ಕರ್ಪೆ, ಗಂಗಾಧರ ಪೂಜಾರಿ, ಹರೀಶ್ ಪೂಜಾರಿ ಪಾದೆ, ದಾಮೋದರ ಪೂಜಾರಿ ಸಮಾಜಮಂದಿರ,ಮತ್ತೀತರರು ಉಪಸ್ಥಿತರಿದ್ದರು.

ಜಿಲ್ಲಾ ಪಂಚಾಯತ ಸದಸ್ಯ ತುಂಗಪ್ಪ ಬಂಗೇರ ಭೇಟಿ ನೀಡಿ ಶುಭ ಹಾರೈಸಿ ಕಾರ್ಯಕ್ರಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts