ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಸದಸ್ಯರ ವಾರ್ಡ್ ನಲ್ಲಿ ಅಭಿವೃದ್ಧಿ ಕಡೆಗಣನೆ, ಚುನಾಯಿತ ಜನಪ್ರತಿನಿಧಿಗಳಿಗೆ ಅಧಿಕಾರವಿಲ್ಲದೇ ಇರುವುದು, ನಿರ್ಮಲ ಬಂಟ್ವಾಳ ಯೋಜನೆಯಡಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಸ್ಥಗಿತಗೊಂಡಿರುವುದು, ಕುಡಿಯುವ ನೀರು ಒದಗಿಸಲು ವಿಫಲವಾಗಿರುವುದು, ನೀರಿನ ಬಿಲ್ಲಿನಲ್ಲಿ ಏರಿಕೆಯಾಗಿರುವುದನ್ನು ಪ್ರಸ್ತಾಪಿಸಿದ ಅವರು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಸುಧೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದ್ಯಸರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ. ಎಸ್. ಮಹಮ್ಮದ್, ತಾಲೂಕ್ ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯರಾದ ವಾಸು ಪುಜಾರಿ ಲೊರೆಟ್ಟೊ, ಗಂಗಾಧರ ಪೂಜಾರಿ, ಲೋಲಾಕ್ಷ ಶೆಟ್ಟಿ, ಮೊಹಮ್ಮದ್ ನಂದರಬೆಟ್ಟು, ಜೆಸಿಂತಾ ಡಿ,ಸೋಜ, ಗಾಯತ್ರಿ ಪ್ರಕಾಶ್, ಲುಕ್ಮಾನ್, ಮಹಮ್ಮದ್ ಶರಿಫ್, ಅಬೂಬಕ್ಕರ್ ಸಿಧ್ದೀಕ್. ಮುಖಂಡರಾದ ಜಗದೀಶ್ ಕೊಯಿಲ, ಪದ್ಮನಾಭ ರೈ, ಚಿತ್ತರಂಜನ್ ಶೆಟ್ಟಿ, ಮದುಸೂಧನ್ ಶೆಣೈ, ಪದ್ಮಸ್ಮಿತ್, ಅಮ್ಮು ಅರಬಿಗುಡ್ಡೆ, ವೆಂಕಪ್ಪ ಪೂಜಾರಿ, ರಪೀಕ್ ಪಲ್ಲಮಜಲು, ವಿನೋದ್‌ರಾಜ್ ಕೊಯಿಲ ಉಪಸ್ಥಿತರಿದ್ದರು.