ಬಂಟ್ವಾಳ: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನರಾದ ಹಿನ್ನೆಲೆಯಲ್ಲಿ ಬಿಜೆಪಿಯ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಸಂತಾಪ ಸೂಚಕ ಸಭೆ ಶನಿವಾರ ಪಕ್ಷದ ಕಚೇರಿಯಲ್ಲಿ ಉಪಾಧ್ಯಕ್ಷ ರೊನಾಲ್ಡ್ ಡಿಸೋಜ ಅಧ್ಯಕ್ಷತೆಯಲ್ಲಿ ನಡೆಯಿತು.
ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿಗಳಾದ ಸೀತಾರಾಮ ಪೂಜಾರಿ, ಪುರುಷೋತ್ತಮ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಕ್ಷೇತ್ರ ಯುವ ಮೋರ್ಚಾ ಅಧ್ಯಕ್ಷರಾದ ಪ್ರದೀಪ್ ಅಜ್ಜಿಬೆಟ್ಟು, ಉಪಾಧ್ಯಕ್ಷರಾದ ಕಾರ್ತಿಕ್ ಬಳ್ಳಾಲ್, ಸುರೇಶ್ ಕೋಟ್ಯಾನ್, ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಭಾರತಿ ಚೌಟ, ಪ್ರಧಾನ ಕಾರ್ಯದರ್ಶಿ ಸೀಮಾ ಮಾಧವ, ಜಿಲ್ಲಾ ರೈತ ಮೋರ್ಚಾ ಸದಸ್ಯರಾದ ಪ್ರೇಮನಾಥ ಶೆಟ್ಟಿ, ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಯಶೋಧರ ಕರ್ಬೇಟ್ಟು, ಪುರಸಭಾ ಮಾಜಿ ಸದಸ್ಯರಾದ ಭಾಸ್ಕರ ಟೈಲರ್, ಕೊಳ್ನಾಡು ಶಕ್ತಿಕೇಂದ್ರದ ಸದಸ್ಯರಾದ ಅಭಿಷೇಕ್ ರೈ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…