ಬಂಟ್ವಾಳ

ಸರ್ಕಾರಗಳ ಸುಗ್ರೀವಾಜ್ಞೆ ವಿರೋಧಿಸಿ ಸಿಪಿಐನಿಂದ ಪ್ರತಿಭಟನೆ

ಜಾಹೀರಾತು

ಬಂಟ್ವಾಳ: ಕರ್ನಾಟಕ ಭೂ ಸುಧಾರಣ ತಿದ್ದುಪಡಿ ಸುಗ್ರಿವಾಜ್ಞೆ, ಎಪಿಎಂಸಿ ಕಾಯ್ದೆ ಸುಗ್ರಿವಾಜ್ಞೆ, ಕೈಗಾರಿಕೆ ವ್ಯಾಜ್ಯಗಳು ಮತ್ತು ಇತರ ಕಾರ್ಮಿಕ ಕಾಯ್ದೆ ತಿದ್ದುಪಡಿ ಸುಗ್ರಿವಾಜ್ಞೆಗಳನ್ನು ಜಾರಿ ಮಾಡದಂತೆ ಒತ್ತಾಯಿಸಿ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗ ಶನಿವಾರ ಪ್ರತಿಭಟನೆ ನಡೆಯಿತು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಜಿಲ್ಲಾ ಸಹಕಾರ್ಯದರ್ಶಿ ಬಿ. ಶೇಖರ್ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದರು. ಸಂಘಟನೆಯ ಪ್ರಮುಖರಾದ ಎಚ್. ವಿ. ರಾವ್, ಶ್ರೀನಿವಾಸ ಭಂಡಾರಿ, ಪ್ರೇಮನಾಥ ಕೆ, ಭಾರತ್ ಪ್ರಶಾಂತ್, ಆರ್. ಡಿ. ಸೋನ್ಸ್, ಸರಸ್ವತಿ ಕಡೇ ಶಿವಾಲಯ, ರತಿ ಎಸ್., ಬಾಬು ಭಂಡಾರಿ, ದಿನೇಶ್ ಮಂಗಳೂರು, ಹರ್ಷಿತ್, ಕೇಶವತಿ, ಕುಸುಮ, ದೀಪಕ್ ಮಂಗಳೂರು, ಸುಧಾಕರ ಕಲ್ಲೂರು ಉಪಸ್ಥಿತರಿದ್ದರು. ಸುರೇಶ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು. ಪ್ರೇಮನಾಥ್ ಕೆ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago