ವಿಟ್ಲ

ಧಾರಾಕಾರ ಮಳೆ: ಗುಡ್ಡ ಕುಸಿದು ಮನೆ ನೆಲಸಮ, ಆರು ಮಂದಿಗೆ ಗಾಯ

ಜಾಹೀರಾತು

ಜಾಹೀರಾತು

ಮನೆ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣವಾಗಿ ನೆಲಸಮಗೊಂಡ ಪರಿಣಾಮ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಮಂಗಳಪದವು ಸಮೀಪದ ಬನಾರಿ  ಬಾಬುಕಟ್ಟೆ ಎಂಬಲ್ಲಿ ಸಂಭವಿಸಿದೆ‌.

ತರಕಾರಿ ವ್ಯಾಪಾರ ನಡೆಸುತ್ತಿರುವ ಅಬ್ದುಲ್ಲ ಎಂಬವರ ಮನೆಯ ಪಕ್ಕದ ಧರೆ ಜೋರಾದ ಮಳೆಗೆ ಕುಸಿದು ಮನೆ ಮೇಲೆ ಉರುಳಿ ಬಿದ್ದಿದೆ. ಇದರಿಂದ ಮನೆಯ ಸಂಪೂರ್ಣವಾಗಿ ನೆಲಸಮವಾಗಿದೆ. ಘಟನೆಯಲ್ಲಿ ಕುಟುಂಬದ ಆರು ಮಂದಿ ಮನೆಯ ಅವಷೇದಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದರು. ತಕ್ಷಣವೇ ಕಾರ್ಯ ಪ್ರವೃತ್ತರಾದ ಸ್ಥಳೀಯರು ಆರು ಮಂದಿಯನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.  ಮನೆ ಯಜಮಾನ ಅಬ್ದುಲ್ಲ, ಪತ್ನಿ ಜೋಹಾರ, ಮಕ್ಕಳಾದ ಅರಫಾಝ್, ಇರ್ಪಾನ್, ತಸ್ಲೀಮಾ, ಮಿಶ್ರಿಯಾ ಗಾಯಗೊಂಡಿದ್ದು, ವಿಟ್ಲ ಹಾಗೂ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ.  ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಬಂಟ್ವಾಳ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಣ್ಣು ಸವೆಯುತ್ತಿರುವ ಆತಂಕ ಉಂಟಾಗಿದ್ದು, ಹಲವು ಕಡೆ ಗುಡ್ಡ ಕುಸಿಯುವ ಭೀತಿ ಎದುರಾಗಿದೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts