ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಕೋವಿಡ್ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮಗಳು ಮತ್ತು ಸೌಲಭ್ಯಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭ ಉಪಸ್ಥಿತರಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮತ್ತು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪುಷ್ಪಲತಾ ಆಸ್ಪತ್ರೆಗೆ ಸಂಬಂಧಪಟ್ಟ ಮಾಹಿತಿಯನ್ನು ನೀಡಿದರು. ಇದೇ ವೇಳೆ ಬಾಳ್ತಿಲದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ಈ ವೇಳೆ ತಹಸೀಲ್ದಾರ್ ರಶ್ಮಿ ಎಸ್.ಆರ್, ಅಧಿಕಾರಿಗಳು ಉಪಸ್ಥಿತರಿದ್ದು ಪೂರಕ ಮಾಹಿತಿಯನ್ನು ನೀಡಿದರು.