ಬಂಟ್ವಾಳ

ಬಂಟ್ವಾಳ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಜಾಹೀರಾತು

ಬಂಟ್ವಾಳ: ಇತ್ತೀಚೆಗೆ ನಿಧನ ಹೊಂದಿದ ಬಂಟ್ವಾಳ ತಾಲೂಕು ಕಚೇರಿಯ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ಅವರಿಗೆ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ತಾಲೂಕು ಕಚೇರಿ ಸಿಬ್ಬಂದಿ ಮೌನ ಪ್ರಾರ್ಥನೆ ಮತ್ತು ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಮರ್ಪಿಸಿದರು.

ಜಾಹೀರಾತು

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಎಸ್ ಆರ್, ಬೇರೆ ಬೇರೆ ತಾಲೂಕಿನಲ್ಲಿ ನಿಷ್ಠಾವಂತರಾಗಿ ಕರ್ತವ್ಯ  ಸಲ್ಲಿಸಿದ ಬಂಟ್ವಾಳದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರರಾಗಿ ಸೇವೆ ಸಲ್ಲಿಸಿದ ಇವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತ ಎಲ್ಲರಿಗೂ ನೀಡಲಿ ಎಂದು ಹೇಳಿದರು. ಬಂಟ್ವಾಳ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಉಮಾನಾಥ ರೈ ಮೇರಾವು ಮಾತನಾಡಿ ನೌಕರ ಸ್ನೇಹಿಯಾಗಿ ಸರಳತೆಯಿಂದ ಕರ್ತವ್ಯ ನಿರ್ವಹಿಸಿದ ರಾಧಾಕೃಷ್ಣರವರ ಅಗಲಿಕೆ ತುಂಬಲಾಗದ ನಷ್ಟ ಉಂಟು ಮಾಡಿದೆ ಎಂದರು. ಈ ವೇಳೆ ತಾಲೂಕು ಕಚೇರಿ ಸಿಬ್ಬಂದಿಗಳು, ತಾಲೂಕು ಕಚೇರಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು. ಗ್ರಾಮಕರಣಿಕರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ