Categories: Uncategorized

ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಕರಿಮಣಿಸರ ಎಳೆದು ಪರಾರಿ

ಜಾಹೀರಾತು

ಬಂಟ್ವಾಳ: ದ್ವಿಚಕ್ರ ವಾಹನವೊಂದರಲ್ಲಿ ಬಂದ ವ್ಯಕ್ತಿಯೋರ್ವ ಬೀಡಿ ಬ್ರಾಂಚ್ ನಿಂದ ಮರಳುತ್ತಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಕರಿಮಣಿಸರವನ್ನು ಎಳೆದು ಪರಾರಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಬಳಿಯ ಮರುವಾಳ ಎಂಬಲ್ಲಿ ನಡೆದಿದೆ.

ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಸಮೀಪದ ಮರುವಾಳ ನಿವಾಸಿ ಮಹಿಳೆ ದೂರುದಾರರು. ಸೆ.22ರಂದು ಮದ್ಯಾಹ್ನದ ವೇಳೆ ಬೀಡಿಕೊಟ್ಟು ಮನೆಗೆ ಹಿಂದಿರುಗುತ್ತಿದ್ದ ವೇಳೆ ಕುಂಡಡ್ಕ ಭಾಗದಿಂದ ದ್ವಿಚಕ್ರವಾಹನದಲ್ಲಿ ಬಂದ ವ್ಯಕ್ತಿಯೋರ್ವ ನನ್ನ ಕುತ್ತಿಗೆಯಲ್ಲಿದ್ದ 4 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿದ್ದಾನೆ ಎಂದು ಅವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ