ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರ ಸಭೆ ಅಧ್ಯಕ್ಷ ಬೇಬಿ ಕುಂದರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ಸಿದ್ಧತೆ ಹಾಗೂ ಪಕ್ಷದ ಚಟುವಟಿಕೆ ಬಗ್ಗೆ ಚರ್ಚಿಸಲಾಯಿತು. ಮಾಜಿ ಸಚಿವ ಬಿ ರಮಾನಾಥ ರೈ ಮಾರ್ಗದರ್ಶನದಂತೆ ಚುನಾವಣೆಗೆ ಸಜ್ಜು ಗೊಳ್ಳುವಂತೆ ನಿರ್ಣಯಿಸಲಾಯಿತು. ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷರಾದ ಸದಾನಂದ ಕುಲಾಲ್ ರಾಯಿ, ಪರಿಶಿಷ್ಟ ಜಾತಿ ಸಮಿತಿ ಅಧ್ಯಕ್ಷ ಗಂಗಯ್ಯ ಬಿ ಎನ್, ಅಲ್ಪಸಂಖ್ಯಾತ ವಿಭಾಗ ಅಧ್ಯಕ್ಷ ಮೊಹಮ್ಮದ್ ಸಂಗಬೆಟ್ಟು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಜಗದೀಶ್ ಕೊಯಿಲ, ಮಾಣಿಕ್ಯ ರಾಜ್ ಜೈನ್, ಪ್ರದಾನ ಕಾರ್ಯದರ್ಶಿಗಳಾದ ಮಹಾಬಲ ಬಂಗೇರ, ಗುರುಪ್ರಸಾದ್ ಶೆಟ್ಟಿ, ರವಿ ಪೂಜಾರಿ ಪಂಜೀಕಲ್ಲು, ವಿಶ್ವನಾಥ್ ಗೌಡ ಮಣಿ, ಉಮೇಶ್ ಕುಲಾಲ್ ನಾವೂರು, ರಿಚರ್ಡ್ ಮೇನೇಜಸ್ ಅಮ್ಟಾಡಿ, ಕೋಶಾಧಿಕಾರಿ ತಿಲಕ್ ಪೂಜಾರಿ ಸುದೆಕಾರ್, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಸುರೇಶ್ ಪೂಜಾರಿ ಪಂಜಿಕಲ್ಲು ಉಪಸ್ಥಿತರಿದ್ದರು.
Be the first to comment on "ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ"