ಬಂಟ್ವಾಳ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಸಂತಾಪ ಸೂಚಕ ಸಭೆ ಬಿಜೆಪಿಯ ಬಂಟ್ವಾಳ ಕ್ಷೇತ್ರ ಕಚೇರಿಯಲ್ಲಿ ನಡೆಯಿತು.
ಬುಡಾ ಅಧ್ಯಕ್ಷ ಹಾಗೂ ಪಕ್ಷದ ಹಿರಿಯ ನಾಯಕ ಬಿ.ದೇವದಾಸ ಶೆಟ್ಟಿ ಮಾತನಾಡಿ, ಸುರೇಶ್ ಅಂಗಡಿ ಅವರು ಪಕ್ಷಕ್ಕೆ ಹಾಗೂ ರೈಲ್ವೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಬಿಜೆಪಿ ಬಂಟ್ವಾಳ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರದಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ, ಡೊಂಬಯ ಅರಳ ಮತ್ತು ಪ್ರಮುಖ ನಾಯಕರು ಉಪಸ್ಥಿತರಿದ್ದರು,