ಬಂಟ್ವಾಳ: ಬಂಟ್ವಾಳ ತಾಲೂಕಿನ ಕಂದಾಯ ಇಲಾಖಾ ಸಿಬ್ಬಂದಿಗೆ ಆರೋಗ್ಯ ತಪಾಸಣಾ ಶಿಬಿರ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಸೇವಾಂಜಲಿ ಪ್ರತಿಷ್ಠಾನ ಮತ್ತು ಕೆ.ಎಸ್.ಹೆಗ್ಡೆ ಆಸ್ಪತ್ರೆ ಸಹಯೋಗದಲ್ಲಿ ನಡೆಯಿತು.
ತಹಸೀಲ್ದಾರ್ ರಶ್ಮಿ ಎಸ್ ಆರ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಕರ್ತವ್ಯದ ಒತ್ತಡಗಳ ಮಧ್ಯೆ ಆರೋಗ್ಯವನ್ನು ಕಡೆಗಣಿಸಬೇಡಿ ಎಂದರು.
ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜಾ ಮಾತನಾಡಿ ಸಹೋದ್ಯೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕಾರ್ಯಕ್ರಮ ಆಯೋಜಿಸಿದ ತಹಸೀಲ್ದಾರ್ ಕಾರ್ಯ ಶ್ಲಾಘನೀಯ ಎಂದರು. ವೈದ್ಯರಾದ ಡಾ. ಸುರೇಶ್, ಡಾ. ಕೆ ಸುಬ್ರಹ್ಮಣ್ಯ, ಡಾ. ಪ್ರೇರಣಾ, ಡಾ.ಸಂತೋಷ್ ಪ್ರಭು, ಡಾ.ಗೋವಿಂದ ರಾಜ್ ಭಟ್ ಮಾಹಿತಿ ನೀಡಿದರು. ವಿವಿಧ ಇಲಾಖೆಗಳ ಸಿಬ್ಬಂದಿ ಇದರ ಪ್ರಯೋಜನ ಪಡೆದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.
Be the first to comment on "ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಆರೋಗ್ಯ ತಪಾಸಣಾ ಶಿಬಿರ"