ಬಂಟ್ವಾಳ: ಬಿ.ಸಿ.ರೋಡ್ ಕೈಕಂಬದ ಪೊಳಲಿ ದ್ವಾರದ ಬಳಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ನಿಲ್ದಾಣವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೋಮವಾರ ಬೆಳಗ್ಗೆ ಲೋಕರ್ಪಣೆಗೊಳಿಸಿದರು.
ರಿಕ್ಷಾ ಚಾಲಕರು ಸೇವಾ ಮನೋಭಾವದಿಂದ ದುಡಿಯುತ್ತಿದ್ದು ತಮ್ಮ ನಿತ್ಯ ದುಡಿಮೆಯ ಜೊತೆ ವೈದ್ಯಕೀಯ ತುರ್ತು ಪರಿಸ್ಥಿತಿಯಲ್ಲಿ ಯಾವುದೇ ಸಮಯದಲ್ಲಿ ಜನಸಾಮಾನ್ಯರಿಗೆ ಸ್ಪಂದಿಸುವ ಮೂಲಕ ವಿಶ್ವಾಸ ಅರ್ಹರಾಗಿರುತ್ತಾರೆ. ಈ ಭಾಗದ ರಿಕ್ಷಾ ಚಾಲಕರು ಬಹುದಿನಗಳ ಬೇಡಿಕೆಯನ್ನು ಇಂದು ಈಡೇರಿಸಿದ್ದು ಮುಂದಿನ ದಿನಗಳಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಲ್ಲಾ ರಿಕ್ಷಾ ನಿಲ್ದಾಣಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸುವುದಾಗಿ ತಿಳಿಸಿದರು.
ಬೂಡ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಪ್ರಮುಖರಾದ ರಮನಾಥ ರಾಯಿ, ಪ್ರಕಾಶ್ ಅಂಚನ್, ಗಣೇಶ್ ದಾಸ್,ಮಹಾಬಲ ಶೆಟ್ಟಿ, ಸಂಜೀವ ಪೂಜಾರಿ ಪಿಲಿಂಗಾಲು, ಸೀತಾರಾಮ ಪೂಜಾರಿ, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಸುದರ್ಶನ್ ಬಜ, ಅಭಿಯಂತರರಾದ ಡೊಮಿನಿಕ್ ಡಿಮೇಲ್ಲೋ, ಅಶ್ವಥ ರಾವ್ ಬಾಳಿಕೆ, ಪ್ರಮೋದ್ ನೂಜಿಪ್ಪಾಡಿ, ರಿಕ್ಷಾ ಚಾಲಕರ ಅಧ್ಯಕ್ಷರಾದ ಚಿತ್ತರಂಜನ್ ಪೂಜಾರಿ, ಕಾರ್ಯದರ್ಶಿ ಇಸ್ಮಾಯಿಲ್, ಗುತ್ತಿಗೆದಾರರದ ಕಾರ್ತಿಕ್ ಬಲ್ಲಾಳ್, ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಪೊಳಲಿ ದ್ವಾರದ ಬಳಿ ರಿಕ್ಷಾ ತಂಗುದಾಣ: ಶಾಸಕ ರಾಜೇಶ್ ನಾಯ್ಕ್ ಅವರಿಂದ ಲೋಕಾರ್ಪಣೆ"