ಬಂಟ್ವಾಳ: ಕಂದಾಯ ಇಲಾಖೆ ಬಂಟ್ವಾಳ , ದೇರಳಕಟ್ಟೆ ಜ. ಕೆ.ಎಸ್.ಹೆಗ್ಡೆ ಆಸ್ಪತ್ರೆ, ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಬಂಟ್ವಾಳ ತಾಲೂಕು ಕಂದಾಯ ಇಲಾಖಾ ಸಿಬ್ಬಂದಿಯಿಂದ ರಕ್ತದಾನ ಶಿಬಿರ ಬಂಟ್ವಾಳ ಮಿನಿವಿಧಾನ ಸೌಧದಲ್ಲಿ ನಡೆಯಿತು. ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರು ಸ್ವತಃ ರಕ್ತದಾನ ದಾನ ಮಾಡುವ ಮೂಲಕ ಇಲಾಖಾ ಸಿಬ್ಬಂದಿಗೆ ಮಾದರಿಯಾದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು. ತಹಸೀಲ್ದಾರ್ ರಶ್ಮಿ ಎಸ್.ಆರ್, ಬಂಟ್ವಾಳ ಬುಡಾ ಆಧ್ಯಕ್ಷ ಬಿ.ದೇವದಾಸ ಶೆಟ್ಟಿ, ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಜ.ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ಡಾ. ಶ್ರೀಲಕ್ಷ್ಮಿ, ಉಪತಹಸೀಲ್ದಾರ್ ಗಳಾದ ರಾಜೇಶ್ ನಾಯ್ಕ್, ರವಿಶಂಕರ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು ಉಪಸ್ಥಿತರಿದ್ದರು. ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನೂ ಆಯೋಜಿಸಲಾಗಿದ್ದು, ಕಳೆದ ವರ್ಷವೂ ಸ್ವಚ್ಛತಾ ಕಾರ್ಯವನ್ನು ಕಂದಾಯ ಇಲಾಖೆ ನಡೆಸಿತ್ತು. ಗ್ರಾಮ ಸಹಾಯಕರು, ಗ್ರಾಮಕರಣಿಕರು ಮತ್ತು ಕಚೇರಿ ಸಿಬ್ಬಂದಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.
Be the first to comment on "ಬಂಟ್ವಾಳ ತಾಲೂಕು ಕಚೇರಿಯಲ್ಲಿ ರಕ್ತದಾನ ಶಿಬಿರ"