ಬಂಟ್ವಾಳ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ರಕ್ತದಾನ ಶಿಬಿರ

ಜಾಹೀರಾತು

ಬಂಟ್ವಾಳ: ಕಂದಾಯ ಇಲಾಖೆ ಬಂಟ್ವಾಳ , ದೇರಳಕಟ್ಟೆ ಜ. ಕೆ.ಎಸ್.ಹೆಗ್ಡೆ ಆಸ್ಪತ್ರೆ, ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಬಂಟ್ವಾಳ ತಾಲೂಕು ಕಂದಾಯ ಇಲಾಖಾ ಸಿಬ್ಬಂದಿಯಿಂದ ರಕ್ತದಾನ ಶಿಬಿರ ಬಂಟ್ವಾಳ ಮಿನಿವಿಧಾನ ಸೌಧದಲ್ಲಿ ನಡೆಯಿತು. ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರು ಸ್ವತಃ ರಕ್ತದಾನ ದಾನ ಮಾಡುವ ಮೂಲಕ ಇಲಾಖಾ ಸಿಬ್ಬಂದಿಗೆ ಮಾದರಿಯಾದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು. ತಹಸೀಲ್ದಾರ್ ರಶ್ಮಿ ಎಸ್.ಆರ್,  ಬಂಟ್ವಾಳ ಬುಡಾ ಆಧ್ಯಕ್ಷ ಬಿ.ದೇವದಾಸ ಶೆಟ್ಟಿ, ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಜ.ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ಡಾ. ಶ್ರೀಲಕ್ಷ್ಮಿ, ಉಪತಹಸೀಲ್ದಾರ್ ಗಳಾದ ರಾಜೇಶ್ ನಾಯ್ಕ್, ರವಿಶಂಕರ್,  ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು ಉಪಸ್ಥಿತರಿದ್ದರು. ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನೂ ಆಯೋಜಿಸಲಾಗಿದ್ದು, ಕಳೆದ ವರ್ಷವೂ ಸ್ವಚ್ಛತಾ ಕಾರ್ಯವನ್ನು ಕಂದಾಯ ಇಲಾಖೆ ನಡೆಸಿತ್ತು. ಗ್ರಾಮ ಸಹಾಯಕರು, ಗ್ರಾಮಕರಣಿಕರು ಮತ್ತು ಕಚೇರಿ ಸಿಬ್ಬಂದಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ