ಬಂಟ್ವಾಳ: ಗಾಂಧಿ ಜಯಂತಿಯ ಪ್ರಯುಕ್ತ ಬಂಟ್ವಾಳ ಪುರಸಭೆ ವತಿಯಿಂದ ಜೇಸಿಐ ಬಂಟ್ವಾಳದ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮ ಬಂಟ್ವಾಳದ ಬಡ್ಡಕಟ್ಟೆಯಲ್ಲಿ ನಡೆಯಿತು.
ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರ ನೇತೃತ್ವದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪುರಸಭೆಯ ವಾಣಿಜ್ಯ ಸಂಕೀರ್ಣ ಹಾಗೂ ಬಸ್ಸು ನಿಲ್ದಾಣವನ್ನು ಸ್ವಚ್ಚಗೊಳಿಸಲಾಯಿತು. ಈ ಸಂದರ್ಭ ಪುರಸಭೆಯ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಕಚೇರಿ ವ್ಯವಸ್ಥಾಪಕಿ ಲೀಲಾವತಿ, ಆರೋಗ್ಯಾಧಿಕಾರಿ ರವಿಕೃಷ್ಣ, ಪುರಸಭಾ ಸಿಬ್ಬಂದಿಗಳು, ಪೌರಕಾರ್ಮಿಕರು, ಜೇಸಿಐ ಬಂಟ್ವಾಳದ ಅಧ್ಯಕ್ಷ ಸದಾನಂದ ಬಂಗೇರ, ನಿಯೋಜಿತ ಅಧ್ಯಕ್ಷ ಉಮೇಶ್ ಆರ್. ಮೂಲ್ಯ, ಪೂರ್ವಾಧ್ಯಕ್ಷ ಡಾ. ಬಾಲಕೃಷ್ಣ ಕುಮಾರ್, ಸದಸ್ಯರಾದ ರವೀಣ ಕುಲಾಲ್, ಕಿಶೋರ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…