ಬಂಟ್ವಾಳ: ದ.ಕ.ಜಿ.ಪಂ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಂಟ್ವಾಳ ವತಿಯಿಂದ 2 ಕೋ.ರೂ.ವೆಚ್ಚದಲ್ಲಿ ತಾಲೂಕಿನ ಬೊಂಡಾಲದಲ್ಲಿ ನಿರ್ಮಾಣಗೊಳ್ಳಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯ ಬಿ.ಸಿ.ರೋಡು(ಪಾಣೆಮಂಗಳೂರು) ಇದರ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ಶುಕ್ರವಾರ ನಡೆಯಿತು.
ಶಿಲಾನ್ಯಾಸ ನೆರವೇರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಕಲಿತ ಮಕ್ಕಳು ಇಂದು ಮುಖ್ಯವಾಹಿನಿಯಲ್ಲಿದ್ದಾರೆ. ಮಕ್ಕಳ ಕಲಿಕಾ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮುಂದಿನ ದಿನಗಳಲ್ಲಿ ಇಲಾಖೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಕೊಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ದ.ಕ.ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸದಸ್ಯೆ ಕಮಲಾಕ್ಷಿ ಪೂಜಾರಿ, ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು.
ಹಿಂದುಳಿಕ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಸ್ವಾಗತಿಸಿದರು. ಇಲಾಖೆಯ ತಾಲೂಕು ಕಲ್ಯಾಣ ಅಧಿಕಾರಿ ಬಿಂದಿಯಾ ನಾಯಕ್ ಪ್ರಸ್ತಾವನೆಗೈದರು. ವಾಮದಪದವು ವಿದ್ಯಾರ್ಥಿನಿ ನಿಲಯದ ಭವ್ಯ ವಂದಿಸಿದರು. ನಿಲಯದ ಅಧೀಕ್ಷಕಿ ಭವಾನಿ ಕಾರ್ಯಕ್ರಮ ನಿರ್ವಹಿಸಿದರು.