ಬಂಟ್ವಾಳ: ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಅತ್ಯಾಚಾರ ಪ್ರಕರಣ ಮತ್ತು ಹತ್ಯೆ ಘಟನೆಯಾಗಿದ್ದು, ಮಹಿಳೆಯರ ರಕ್ಷಣೆಗೆ ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ.ರೋಡಿನ ಪೊಳಲಿ ದ್ವಾರದಿಂದ ರಕ್ತೇಶ್ವರಿ ದೇವಸ್ಥಾನದ ಮುಂಭಾಗದವರೆಗೆ ಕಾಂಗ್ರೆಸ್ ವತಿಯಿಂದ ಮೊಂಬತ್ತಿ ಜಾಥಾ ಶುಕ್ರವಾರ ಮುಸ್ಸಂಜೆ ನಡೆಯಿತು.
ಮೌನ ಮೆರವಣಿಗೆಯಲ್ಲಿ ಸಾಗಿ ಬಂದ ನಾಯಕರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರೈ, ಮಹಿಳೆಯರ ರಕ್ಷಣೆ ಮಾಡಲು ವಿಫಲವಾಗಿರುವ ಉತ್ತರ ಪ್ರದೇಶ ಸರ್ಕಾರವನ್ನು ವಜಾ ಮಾಡಿ, ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಒತ್ತಾಯಿಸಿದರು. ಈ ವೇಳೆ ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಜಿಪಂ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಎಂ.ಎಸ್.ಮುಹಮ್ಮದ್, ಮಂಜುಳಾ ಮಾವೆ, ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮಹಮ್ಮದ್, ಮಂಜುಳಾ ಮಾಧವ ಮಾವೆ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಮುಖಂಡರಾದ ಸದಾಶಿವ ಬಂಗೇರ, ಪದ್ಮನಾಭ ರೈ, ಚಂದ್ರಶೇಖರ ಪೂಜಾರಿ, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಜನಾರ್ಧನ ಚೆಂಡ್ತಿಮಾರ್, ವಾಸು ಪೂಜಾರಿ, ಗಂಗಾಧರ ಪೂಜಾರಿ, ಮಹಮ್ಮದ್ ನಂದರಬೆಟ್ಟು, ಯೂಸುಫ್ ಕರಂದಾಡಿ, ಗಾಯತ್ರಿ ಆರ್ ಸಪಲ್ಯ, ಐಡಾ ಸುರೇಶ್, ರವೀಂದ್ರ ಸಪಲ್ಯ, ಮಧುಸೂದನ್ ಶೆಣೈ, ಲೋಲಾಕ್ಷ ಶೆಟ್ಟಿ, ಮಹಮ್ಮದ್ ಶರೀಫ್ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಉತ್ತರ ಪ್ರದೇಶ ಘಟನೆ ಖಂಡಿಸಿ ಕಾಂಗ್ರೆಸ್ ನಿಂದ ರೈ ನೇತೃತ್ವದಲ್ಲಿ ಮೊಂಬತ್ತಿ ಮೆರವಣಿಗೆ"