ಬಂಟ್ವಾಳದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಕಚೇರಿ ಉನ್ನತಿಸೌಧದ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಸಮಿತಿ, ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ.ಟ್ರಸ್ಟ್ ಬಂಟ್ವಾಳ ,ಮಂಜುನಾಥೇಶ್ವರ ವ್ಯಸನಮುಕ್ತ ಸಂಶೋಧನ ಕೇಂದ್ರ ಉಜಿರೆ, ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿಜಯಂತಿ ಪ್ರಯುಕ್ತ ನವಜೀವನೋತ್ಸವ ನಡೆಯಿತು.
ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಉದ್ಘಾಟಿಸಿದರು.
ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೋಡಾಜೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ರುಕ್ಮಯ ಪೂಜಾರಿ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರುಗಳಾದ ಕೈಯ್ಯೂರು ನಾರಾಯಣ ಭಟ್, ಕಿರಣ್ ಹೆಗ್ಡೆ ಅನಂತಾಡಿ ,ಪ್ರಕಾಶ್ ಕಾರಂತ್, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಮಾಧವ ವಳವೂರು ಅತಿಥಿಗಳಾಗಿದ್ದು, ಸಮಯೋಚಿತವಾಗಿ ಮಾತನಾಡಿ ಶುಭಹಾರೈಸಿದರು. ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ, ರೋನಾಲ್ಡ್ ಡಿಸೋಜಾ, ಮೇಲ್ವಿಚಾರಕ ಕೇಶವ, ತಾಲೂಕಿನ ಎಲ್ಲಾ ವಲಯಾಧ್ಯಕ್ಷರು,ಮೇಲ್ವಿಚಾರಕರು,ನವಜೀವನ ಸದಸ್ಯರು ಉಪಸ್ಥಿತರಿದ್ದರು.
ಇದೇ ವೇಳೆ ಫಲಾನುಭವಿಗಳಿಗೆ ವೀಲ್ ಚೆಯರ್, ಅನಾರೋಗ್ಯ ಪೀಡಿತರಿಗೆ ವಾಟರ್ ಬೆಡ್ ವಿವಿಧ ಸಲಕರಣೆ ಹಾಗೂ ಸಹಾಯಧನವನ್ನು ವಿತರಿಸಲಾಯಿತು. ಹಾಗೆಯೇ ಭಾಗವಹಿಸಿದ ನವಜೀವನ ಸದಸ್ಯರಿಗೆ ಮಾಸ್ಕ್ ಜೊತೆಗೆ ಗುಲಾಬಿ ಹೂ ನೀಡಿ ಅಭಿನಂದಿಸಲಾಯಿತು. ಕೋವಿಡ್ -19 ನಿಯಮವನ್ನು ಪಾಲಿಸಿಕೊಂಡು ಸರಳವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಗಣ್ಯರು,ನವಜೀವನಸದಸ್ಯರು ಸಹಿತ ಎಲ್ಲರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಷಾರ್ಚನೆ ಸಲ್ಲಿಸಿದರು. ಶ್ರೀ ಕ್ಷೇ.ಧ.ಗ್ರಾ.ಯೋ.ಯ ಬಂಟ್ವಾಳ ಘಟಕದ ಯೋಜನಾಧಿಕಾರಿ ಜಯಾನಂದ ಪಿ, ಪ್ರಸ್ತಾವಿಸಿ, ಸ್ವಾಗತಿಸಿದರು. ವಿಟ್ಲ ಘಟಕದ ಯೋಜನಾಧಿಕಾರಿ ಮೋಹನ್ ವಂದಿಸಿದರು. ಹರಿಣಾಕ್ಷಿ, ನಳಿನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.