ಬಂಟ್ವಾಳ

ಉತ್ತರ ಪ್ರದೇಶ ಘಟನೆ: ಬಂಟ್ವಾಳ ಮಿನಿವಿಧಾನಸೌಧ ಮುಂಭಾಗ ಪ್ರತಿಭಟನೆ

ಜಾಹೀರಾತು

ಉತ್ತರಪ್ರದೇಶ ಘಟನೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಬಂಟ್ವಾಳ: ಉತ್ತರ ಪ್ರದೇಶದಲ್ಲಿ ದಲಿತ ಯುವತಿ ದೌರ್ಜನ್ಯ  ಖಂಡಿಸಿ ಭಾರತೀಯ ಮಹಿಳಾ ಒಕ್ಕೂಟ ಹಾಗೂ ಅಖಿಲ ಭಾರತ ಯುವಜನ ಫೆಡರೇಶನ್ ಆಶ್ರಯದಲ್ಲಿ ಶುಕ್ರವಾರ ಬಿಸಿರೋಡಿನ ಮಿನಿವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಭಾರತೀಯ ಮಹಿಳಾ ಒಕ್ಕೂಟದ ರಾಜ್ಯ ಕಾರ್‍ಯದರ್ಶಿ ಭಾರತಿ ಪ್ರಶಾಂತ್ ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಈ ದೇಶದ ದಲಿತ, ವಿದ್ಯಾರ್ಥಿ, ಯುವಜನ ಮಹಿಳೆಯರಿಗೆ ಪೂರಕವಾದ ಕಾನೂನುಗಳನ್ನು ಜಾರಿಗೆ  ತರುವ ಆಶ್ವಾಸನೆಯೊಂದಿಗೆ ಪ್ರತಿ ಹೆಣ್ಣು ಮಗಳ ರಕ್ಷಣೆ ಮತ್ತು ಶಿಕ್ಷಣ ಪಡೆಯುವಂತಾಗಬೇಕು ಎಂಬ ಇರಾದೆಯೊಂದಿಗೆ ಬೇಟಿ ಬಚಾವೋ, ಬೇಟಿ ಪಡಾವೋ ಎಂಬ ಘೋಷಣೆ ನೀಡಿತ್ತು. ಆದರೆ ಅಧಿಕಾರ ಚುಕ್ಕಾಣಿ ಹಿಡಿದು 6 ವರ್ಷ ಕಳೆದಿದೆ. ಅದರೆ ಸರಕಾರದ ಘೋಷಣೆ ಈಡೇರುವ ಬದಲಾಗಿ ಹೆಣ್ಣು ಮಕ್ಕಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ ಎಂಬ ಆತಂಕ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಎಐವೈಎಫ್ ನ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಪ್ರೇಮನಾಥ ಕೆ, ಸಿಪಿಐ ತಾಲೂಕು ಕಾರ್‍ಯದರ್ಶಿ ಬಿ.ಶೇಖರ್ ಮಾತನಾಡಿದರು. ನೇತೃತ್ವವನ್ನು ಮಹಿಳಾ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷೆ ವನಜಾಕ್ಷಿ ಬಿ.ಎಸ್, ಕೋಶಾಧಿಕಾರಿ ಸರಸ್ವತಿ ಕಡೇಶಿವಾಲಯ, ಕೇಶವತಿ, ಮಮತಾ, ಹಾಗೂ ಎಐವೈಎಫ್ ನ ತಾಲೂಕು ಕಾರ್‍ಯದರ್ಶಿ ಶ್ರೀನಿವಾಸ ಭಂಡಾರಿ, ತಾಲೂಕಿನ ನಾಯಕರಾದ  ಸುಕೇಶ್ ಬಿಸಿರೋಡು, ಹರ್ಷಿತ್ ಸುವರ್ಣ ಬಂಟ್ವಾಳ, ಎಂ ಬಿ. ಭಾಸ್ಕರ, ಕಮಲಾಕ್ಷ ಭಂಡಾರಿ,  ವಿದ್ಯಾರ್ಥಿ ನಾಯಕ ಹರ್ಷಿತ್ ರಾಜ್,  ಕಾರ್ಮಿಕ ಮುಖಂಡ ಬಾಬು ಭಂಡಾರಿ, ವಹಿಸಿದ್ದರು. ಎಐವೈಎಫ್ ನ ಮುಖಂಡ ಸುರೇಶ್ ಕುಮಾರ್ ಬಂಟ್ವಾಳ್ ಸ್ವಾಗತಿಸಿ ವಂದಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ