ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮಾಣಿ ವಲಯ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ ಹಾಗೂ ಎನ್.ಎಸ್.ಯು.ಐ. ಬಂಟ್ವಾಳ ಕ್ಷೇತ್ರದ ವತಿಯಿಂದ ನಮ್ಮೂರ ಹೆಮ್ಮೆ ಕಾರ್ಯಕ್ರಮ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.
ಈ ವೇಳೆ ಎಸ್.ಎಸ್ ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮಾಜಿ ಸಚಿವರಿಂದ ಪ್ರಶಸ್ತಿ ಪತ್ರ ಸಂವಿಧಾನ ಓದು ಪುಸ್ತಕ ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಎಂ ಎಸ್ ಮೊಹಮ್ಮದ್, ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯರಾದ ಕುಶಲ ಪೆರಾಜೆ, ಎನ್ ಎಸ್ ಯು ಐ ರಾಜ್ಯ ಕಾರ್ಯದರ್ಶಿ ಫಾರೂಕ್ ಬಾಯಾಬ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ವಿನಯ್ ಕುಮಾರ್, ಪ್ರದಾನ ಕಾರ್ಯದರ್ಶಿ ಅಂಕುಶ್ ಶೆಟ್ಟಿ, ಕಾರ್ಯದರ್ಶಿ ಮಹಮ್ಮದ್ ಶಫೀಕ್, ಸಾಮಾಜಿಕ ಜಾಲತಾಣ ಸಂಯೋಜಕ ನಜೀಬ್ ಮಂಚಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ಐಡಾ ಸುರೇಶ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ರಝಕ್ ಕೊರ್ಯಾ, ನಿರಂಜನ್ ರೈ, ಅಬ್ದುಲ್ ಅಝೀಜ್, ಮಾಣಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ, ಮಾಣಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಕೇಶ್ ಶೆಟ್ಟಿ, ಬೂತ್ ಅಧ್ಯಕ್ಷರಾದ ನಾಗರಾಜ ಪೂಜಾರಿ, ಉಮೇಶ್ ನಾಯ್ಕ್, ಜಯರಾಮ್ ಪೂಜಾರಿ, ಮಾಣಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಇದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…