ಉಡುಪಿ ಜಿಪಂ ಸಿಇಒ ಆಗಿ ಡಾ. ನವೀನ್ ಭಟ್ ನೇಮಕ

ಜಾಹೀರಾತು

ಉಡುಪಿ: ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ 2017ರಲ್ಲಿ ಐಎಎಸ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದ ಡಾ. ವೈ.ನವೀನ್ ಭಟ್ ನೇಮಕಗೊಂಡಿದ್ದಾರೆ.

ಅವರು ಈ ಹಿಂದೆ ಬಂಟ್ವಾಳ ಪಿಡಬ್ಲ್ಯುಡಿ ಎಇಇ ಆಗಿದ್ದ, ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಉಮೇಶ್ ಭಟ್‌ ಅವರ ಪುತ್ರ.ತಾಯಿ ವಿಜಯಲಕ್ಷ್ಮಿ. ಸಹೋದರಿ ನವ್ಯಾ ಎಂ.ಡಿ. ವ್ಯಾಸಂಗ ಮಾಡುತ್ತಿದ್ದಾರೆ.

ಜಾಹೀರಾತು

ಐಎಎಸ್ ತೇರ್ಗಡೆಯಾದ ಬಳಿಕ ಡಾ. ನವೀನ್ ಭಟ್, ದೆಹಲಿಯಲ್ಲಿ ಮೂರು ತಿಂಗಳ ತರಬೇತಿಯನ್ನು ಆರೋಗ್ಯ ಇಲಾಖೆಯಲ್ಲಿ ಪಡೆದರು. ಬಳಿಕ ಸಹಾಯಕ ಕಮೀಷನರ್ ಆಗಿ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅವರ ಪತ್ನಿಯೂ ಐ.ಆರ್.ಎಸ್. ಆಗಿದ್ದು, ಶಿವಮೊಗ್ಗದಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಡಾ. ನವೀನ್ ಭಟ್ ಐಎಎಸ್ ಅನ್ನು 37ನೇ ಕ್ರಮಾಂಕದಲ್ಲಿ ತೇರ್ಗಡೆ ಹೊಂದಿರುತ್ತಾರೆ. (ಕರ್ನಾಟಕದಲ್ಲಿ 3ನೇ ಸ್ಥಾನ)  ಪ್ರಾಥಮಿಕ ವಿದ್ಯಾಭ್ಯಾಸವನ್ನು ಮೂಡಬಿದಿರೆ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್, ಬಂಟ್ವಾಳ ತಾಲೂಕು ಮೊಡಂಕಾಪು ಇನ್‌ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಗಿಸಿದ್ದು ಪ್ರೌಢ ಶಾಲೆ ಮತ್ತು ಪಿಯೂಸಿ ವಿದ್ಯಾಭ್ಯಾಸವನ್ನು ಅಳಿಕೆ ಶ್ರೀಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ನಡೆಸಿದ್ದರು. 2009ನೇ ಸಿಇಟಿ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ ಮೊದಲ ರ್‍ಯಾಂಕ್ ಪಡೆದಿದ್ದರು. ಎಂಬಿಬಿಎಸ್ ಅನ್ನು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಮಾಡಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಉಡುಪಿ ಜಿಪಂ ಸಿಇಒ ಆಗಿ ಡಾ. ನವೀನ್ ಭಟ್ ನೇಮಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*