ಬಂಟ್ವಾಳ

ಅತ್ಯಾಚಾರ ಘಟನೆ: ಎಬಿವಿಪಿಯಿಂದ ಪ್ರತಿಭಟನೆ

ಜಾಹೀರಾತು

ಬಂಟ್ವಾಳ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಅತ್ಯಾಚಾರ ಪ್ರಕರಣ ಖಂಡಿಸಿ ಬಿ.ಸಿ ರೋಡಿನ ಮಿನಿ ವಿಧಾನಸೌಧ ಮುಂಭಾಗ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ಪ್ರತಿಭಟನೆ ನಡೆಯಿತು. ಅತ್ಯಾಚಾರ ನಡೆಸಿದವರಿಗೆ ಮರಣದಂಡನೆ ವಿಧಿಸಬೇಕು ಎಂದು ರಾಷ್ಟ್ರಪತಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ನಿವೃತ್ತ ಉಪನ್ಯಾಸಕ ಪ್ರೊ.ನಾರಾಯಣ ಭಂಡಾರಿ ಮಾತನಾಡಿ, ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಮರುಕಳಿಸಬಾರದೆಂದಿದ್ದರೆ ಕಠಿಣ ಕಾನೂನಿನ ಜಾರಿಯಾಗಬೇಕು ಎಂದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು,ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಅಖಿಲಾಷ್, ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಹ ಸಂಚಾಲಕರಾದ ದಿನೇಶ್ ಕೊಯಿಲ,ಸಿದ್ದಕಟ್ಟೆ ಘಟಕದ ಅದ್ಯಕ್ಷರಾದ ಗುರುಪ್ರಸಾದ್, ಚೇತನ್ ಒಕ್ಕೆತ್ತೂರು, ಆಕಾಶ್, ಮಹೇಶ್, ಹರ್ಷಿತ್ ಅರಳ, ನಿತಿನ್ ಸಿದ್ದಕಟ್ಟೆ, ತಿಲಕ್ ಶೆಟ್ಟಿ ಪೂಂಜ, ನಾಗರಾಜ್ ಶೆಣೈ, ಅನೀಶ್ ಚೇಳೂರು, ಸುಮಂತ್, ಲಿಖಿತ್ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts