ಜಿಲ್ಲಾ ಸುದ್ದಿ

ಮಾಸ್ಕ್ ಕಡ್ಡಾಯ ಕಟ್ಟುನಿಟ್ಟು, ಶುಚಿತ್ವಕ್ಕೆ ಗರಿಷ್ಠ ಆದ್ಯತೆ, ನಿಯಮ ಉಲ್ಲಂಘಿಸಿದರೆ ಕಾದಿದೆ ಜುಲ್ಮಾನೆ

ದಕ್ಷಿನ ಕನ್ನಡ: ಮಾಸ್ಕ್ ಇಲ್ಲದ 4860 ಮಂದಿ ವಿರುದ್ಧ ಪ್ರಕರಣ

ಬಂಟ್ವಾಳನ್ಯೂಸ್ ನಲ್ಲಿ ಮತ್ತಷ್ಟು ಸುದ್ದಿಗಳನ್ನು ಓದಬೇಕೆಂದಿದ್ದರೆ ಈ ವಾಟ್ಸಾಪ್ ಗುಂಪು ಸೇರಬಹುದು

https://chat.whatsapp.com/K7IFcPCl7vR0dzpr8EOgYD

ಜನಸಾಮಾನ್ಯರು ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸಿ ಸಾರ್ವಜನಿಕ ಸ್ಥಳದಲ್ಲಿ ಓಡಾಡಬೇಕು. ಒಂದು ವೇಳೆ ಮಾಸ್ಕ್ ಧರಿಸದೆ ಓಡಾಡಿದರೆ, ನಗರ ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ಮತ್ತು ಗ್ರಾಪಂ ವತಿಯಿಂದ ದಂಡ ವಸೂಲಾತಿ ಮಾಡಲಾಗುತ್ತದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 4860 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ವರದಿಯಾಗಿದ್ದು, 5,85,825 ರೂ ದಂಡ ವಸೂಲಾತಿ ಆಗಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರಲ್ಲಿ 1,000, ಇತರ ಪ್ರದೇಶದಲ್ಲಿ 500 ರೂ ದಂಡ:

ಅಗತ್ಯಾನುಸಾರ ಸರಿಯಾಗಿ ಮುಖದ ಹೊದಿಕೆಯನ್ನು ಧರಿಸದಿದ್ದಲ್ಲಿ ಮಹಾನಗರ ಪಾಲಿಕೆ ಪ್ರದೇಶಗಳಲ್ಲಿ ರೂ 1,000 ಮತ್ತು ಇನ್ನುಳಿದ ಪ್ರದೇಶಗಳಲ್ಲಿ ರೂ 500 ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಾಮಾಜಿಕ ಅಂತರ:

ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಟ 6 ಅಡಿ ಅಂತರವನ್ನು (2 ಗಜ ಅಂತರ) ಕಾಯ್ದುಕೊಳ್ಳಬೇಕು. ಗ್ರಾಹಕರಲ್ಲಿ ದೈಹಿಕ ಅಂತರ ಇರುವುದನ್ನು ಅಂಗಡಿಗಳ ಮಾಲಕರು ಖಚಿತಪಡಿಸಿಕೊಳ್ಳಬೇಕು.ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದು ದಂಡಾರ್ಹವಾಗಿರುತ್ತದೆ ಎಂದು ತಿಳಿಸಲಾಗಿದೆ.

ಘನತ್ಯಾಜ್ಯ ನಿರ್ವಹಣೆ ಕಟ್ಟುನಿಟ್ಟು:

ಪ್ರತಿ ಅಂಗಡಿಯಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ವಯ ವಿಲೇವಾರಿ ಮಾಡಲು ಕ್ರಮವಹಿಸಬೇಕು. ರಸ್ತೆಗಳಲ್ಲಿ ತ್ಯಾಜ್ಯಗಳನ್ನು ಎಸೆಯದಂತೆ ಕ್ರಮವಹಿಸಬೇಕು. ಉಲ್ಲಂಘಿಸಿದಲ್ಲಿ ಮೇಲೆ ತಿಳಿಸಿದ ನಿಯಮಗಳು, ಘನತ್ಯಾಜ್ಯ ನಿರ್ವಹಣೆ ನಿಯಮಗಳು ಹಾಗೂ ಮಹಾನಗರಪಾಲಿಕೆ ನಿಯಮಗಳಡಿಯಲ್ಲಿ ದಂಡ ವಿಧಿಸಲಾಗವುದು.

ಮೀನುಗಾರಿಕೆ ವ್ಯಾಪಾರ/ ಹಣ್ಣು ಹಂಪಲು, ತರಕಾರಿ ಹಾಗೂ ಇತರೇ ವ್ಯಾಪಾರ ವಹಿವಾಟುಗಳ ನಡೆಸುವ ಸ್ಥಳಗಳಲ್ಲಿ ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ/ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಓರ್ವ ನೋಡಲ್ ಅಧಿಕಾರಿಯನ್ನು ನೇಮಿಸಿ ಪ್ರತಿನಿತ್ಯ ಸರ್ಕಾರಿ ಮಾರ್ಗಸೂಚಿಗಳನ್ನು ಸಾರ್ವಜನಿಕರು/ವರ್ತಕರು ಕಡ್ಡಾಯವಾಗಿ ಪಾಲಿಸುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಹಾಗೂ ಜಿಲ್ಲಾಡಳಿತದ ಗಮನ ತರಬೇಕು ಎಂದು ಸೂಚಿಸಲಾಗಿದೆ.

ಕೆ.ಎಸ್. ಆರ್. ಟಿ. ಸಿ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಪ್ಪದೇ ಮಾಸ್ಕ್ಗಳನ್ನು ಬಳಸಬೇಕು ಹಾಗೂ ಸರ್ಕಾರಿ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕಾಗಿದೆ. ಇದನ್ನು ಉಲ್ಲಂಘಿಸುವ ಪ್ರಯಾಣಿಕರಿಗೆ ಪ್ರಯಾಣಕ್ಕೆ ಅವಕಾಶ ನೀಡದಂತೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕರಿಗೆ ಜಿಲ್ಲೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸೂಕ್ತ ನಿರ್ದೇಶನ ನೀಡಬೇಕು.

ಖಾಸಗಿ ಬಸ್ ,ಆಟೋ, ಕ್ಯಾಬ್ ಇತ್ಯಾದಿ ವಾಹನಗಳಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಬಳಸಿ ಸಂಚರಿಸುವುದು. ಬಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಿ ಉಲ್ಲಂಘನೆಯಾದ್ದಲ್ಲಿ ವಾಹನದ ಮಾಲೀಕರಿಗೆ ದಂಡವನ್ನು ವಿಧಿಸಬೇಕು. ಪೊಲೀಸ್ ಇಲಾಖಾ ಅಧಿಕಾರಿಗಳು ಕೂಡಾ ತಮ್ಮ ಹಂತದಲ್ಲಿ ಆಗಿಂದಾಗ್ಗೆ ವಾಹನ ತಪಾಸಣೆ ಮಾಡಿ ಸರ್ಕಾರಿ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.

ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ ಹಾಗೂ ಎಲ್ಲೆಂದರಲ್ಲಿ ಉಗುಳದಂತೆ ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ/ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಜನಜಾಗೃತಿ ಮೂಡಿಸುವುದರ ಜೊತೆಗೆ ತಮ್ಮ ವ್ಯಾಪ್ತಿಯಲ್ಲಿ ಇದನ್ನು ಉಲ್ಲಂಘಿಸುವ ಸಾರ್ವಜನಿಕರಿಗೆ ದಂಡವನ್ನು ವಿಧಿಸಿ ಅಗತ್ಯ ಕ್ರಮ ಜರುಗಿಸಬೇಕು ಎಂದು . ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ