ಬಂಟ್ವಾಳ

ಬಿ.ಸಿ.ರೋಡಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಉದ್ಘಾಟನೆ

ಜಾಹೀರಾತು

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ  ವಿದ್ಯಾವರ್ಧಕ ಸಂಘ ಪುತ್ತೂರು , ಸಹಕಾರ ಭಾರತಿ ದ.ಕ. ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು ಇವುಗಳ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿಯು ಗೀತಾಂಜಲಿ ಸಭಾಭವನ ಬಿ.ಸಿ.ರೋಡಿನಲ್ಲಿ ಸೋಮವಾರ ಉದ್ಘಾಟನೆಗೊಂಡಿತು. ಸಮಾರಂಭದಲ್ಲಿ ಗ್ರಾಮ ವಿಕಾಸ ಸಮಿತಿ ವಿಭಾಗ ಸಹ ಸಂಯೋಜಕ ಜಿತೇಂದ್ರ ಆಶಯ ಭಾಷಣ ಮಾಡಿ ಭಾರತವು ಆರ್ಥಿಕವಾಗಿ ಸಮರ್ಥವಾಗಲು  ಗ್ರಾಮ ಮಟ್ಟದಲ್ಲಿ ಪರಿವರ್ತನೆಯಾಗಬೇಕು. ಸ್ವಾವಲಂಬನೆಯಿಂದ ಆತ್ಮನಿರ್ಭರ ಭಾರತ ನಿರ್ಮಾಣವಾಗುತ್ತದೆ. ಪ್ರತಿಯೊಬ್ಬರೂ ಮಾಡುವ ವೃತ್ತಿಯಲ್ಲಿ ಉತ್ತಮ ಕೌಶಲ್ಯವನ್ನು ಬೆಳೆಸಿಕೊಂಡು ಪ್ರಾಮಾಣಿಕವಾಗಿ ದುಡಿದರೆ ದೇಶಕ್ಕೆ ಮಾಡುವ ದೊಡ್ಡ ಸೇವೆಯಾಗುತ್ತದೆ ಎಂದರು. 

ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಗೋಪಿನಾಥ ಶೆಟ್ಟಿ ಅದ್ಯಕ್ಷತೆ ವಹಿಸಿ ಮಾತನಾಡಿ ತರಬೇತಿಯಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ ನೀಡುವುದರಿಂದ ಬ್ಯಾಂಕ್‌ಗಳಲ್ಲಿ ಆರ್ಥಿಕ ಸಹಾಯ ಪಡೆಯಲು ಅನುಕೂಲವಾಗುತ್ತದೆ ಎಂದರು.

ರಾ.ಸ್ವ. ಸಂಘದ ಪುತ್ತೂರು ಜಿಲ್ಲಾಕಾರ್ಯವಾಹ ವಿನೋದ್ ಕುಮಾರ್ ಕೊಡ್ಮಾಣ್ ಅತಿಥಿಯಾಗಿ ಭಾಗವಹಿಸಿದ್ದರು.  ದ.ಕ.ಜಿಲ್ಲೆ ಸಹಕಾರ ಭಾರತಿ ಕಾರ್ಯದರ್ಶಿ ಕೃಷ್ಣ ಕೊಂಪದವು  ತರಬೇತಿಯ ಮಾಹಿತಿ ನೀಡಿದರು.

ಜಾಹೀರಾತು

ಮನಮೋಹನ ನಯನಾಡು ಸ್ವಾಗತಿಸಿದರು. ಸಂಯೋಜಕ ವೆಂಕಟ್ರಮಣ ಹೊಳ್ಳ ಮತ್ತು ವಿವಿಧ  ವಿಷಯಗಳ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು. ವಿಠಲ ಕುಮಾರ ಪಾಂಡವರಕಲ್ಲು ಗೀತೆ ಹಾಡಿದರು. ಶಿಬಿರದ ಸಂಚಾಲಕ ದಾಮೋದರ ನೆತ್ತರಕೆರೆ ಕಾರ್ಯಕ್ರಮ ನಿರೂಪಿಸಿದರು. ಹರೀಶ ಕಾಡಬೆಟ್ಟು ವಂದಿಸಿದರು.

ಶಿಬಿರದಲ್ಲಿ 150 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದು ತರಬೇತಿಯು ಅ. 10  ರ ವರೆಗೆ ನಡೆಯಲಿದೆ. ಅಲ್ಯೂಮಿನಿಯಮ್ ಫೆಬ್ರಿಕೇಶನ್ ಮತ್ತು ವೆಲ್ಡಿಂಗ್, ಇಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್, ಕೃಷಿ ಯಂತ್ರೋಪಕರಣ ದುರಸ್ತಿ, ಇಲೆಕ್ರ್ಟಿಕ್ ಉಪಕರಣಗಳ ದುರಸ್ತಿ, ಹೈನುಗಾರಿಕೆ, ಗ್ರಾಹಕ ಮಾಹಿತಿ ಕೇಂದ್ರ, ಫ್ಯಾಶನ್ ಡಿಸೈನ್ಸ್, ಜೇನು ಕೃಷಿ ಮತ್ತು ಮೀನು ಸಾಕಾಣಿಕೆ, ಮೊಬೈಲ್ ರಿಪೇರಿ, ಸಿಸಿ ಟಿವಿ ಅಳವಡಿಕೆಯ ಬಗ್ಗೆ ತರಬೇತಿ ನೀಡಲಾಗುತ್ತಿದೆ. 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ