ಲಯನ್ಸ್ ಕ್ಲಬ್ ಬಂಟ್ವಾಳಕ್ಕೆ ಸಾಲಿನ ಅತ್ಯುತ್ತಮ ಕ್ಲಬ್ ಪ್ರಶಸ್ತಿ

ಜಾಹೀರಾತು

ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳವು 2019-20ನೇ ಸಾಲಿನಲ್ಲಿ ನಡೆಸಿದ ವಿವಿಧ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳಿಗಾಗಿ ಸಾಲಿನ ಅತ್ಯುತ್ತಮ ಕ್ಲಬ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಲಯನ್ಸ್ ನಾಲ್ಕು ಕಂದಾಯ ಜಿಲ್ಲೆಗಳ ಪೈಕಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ನೇತೃತ್ವದ ಲಯನ್ಸ್ ಕ್ಲಬ್ ಬಂಟ್ವಾಳ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಇತ್ತೀಚೆಗೆ ಮಂಗಳೂರಿನ ಸೆಬಾಸ್ಟಿಯನ್ ಹಾಲ್ನಲ್ಲಿ ನಡೆದದಿಲ್ಸೇ ಜಿಲ್ಲಾ ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ರಾಜ್ಯಪಾಲ ರೊನಾಲ್ಡ್ ಗೋಮ್ಸ್ ಅವರಿಂದ ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಮತ್ತವರ ತಂಡ ಪ್ರಶಸ್ತಿಯನ್ನು ಸ್ವೀಕರಿಸಿತು. ಸಂದರ್ಭ ಜಿಲ್ಲಾ ಪ್ರಥಮ ಮಹಿಳೆ ಅನಿತಾ ಗೋಮ್ಸ್, ಪ್ರಥಮ ಉಪರಾಜ್ಯಪಾಲ ವಸಂತ್ ಕುಮಾರ್ ಶೆಟ್ಟಿ, ಜಿಲ್ಲಾ ಸಂಪುಟ ಕಾರ್ಯದರ್ಶಿ ವಿಜಯ ವಿಷ್ಣು ಮಯ್ಯ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ರಾಧಾಕಷ್ಣ ಬಂಟ್ವಾಳ ಹಾಗೂ ಕೋಶಾಧಿಕಾರಿ ದೇವಿಕಾ ದಾಮೋದರ್ ಒಳಗೊಂಡ ತಂಡ ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸಿತ್ತು.

ಸ್ಥಾಪಕಾಧ್ಯಕ್ಷ ಡಾ. ಬಿ. ವಸಂತ ಬಾಳಿಗಾ, ಪೂರ್ವಾಧ್ಯಕ್ಷ ದಾಮೋದರ ಬಿ.ಎಂ. ನೇತೃತ್ವದಲ್ಲಿ ಲಯನ್ಸ್ ಸೇವಾ ಟ್ರಸ್ಟ್ ಮೂಲಕ ನಿರ್ಮಲ ಹೃದಯ ಲಯನ್ಸ್ ವಿಶೇಷ ಚೇತನ ಮಕ್ಕಳ ಪಾಲನಾ ಕೇಂದ್ರ ಲಯನ್ಸ್ ಕ್ಲಬ್ ವತಿಯಿಂದ ಕಳೆದ ೧೧ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಲಯನ್ಸ್ ಕ್ಲಬ್ ಬಂಟ್ವಾಳದ ಸದಸ್ಯ ವಸಂತ ಕುಮಾರ್ ಶೆಟ್ಟಿಯವರು ಮುಂದಿನ ಸಾಲಿನ ಜಿಲ್ಲಾ ರಾಜ್ಯಪಾಲರಾಗಿ ಲಯನ್ಸ್ ಜಿಲ್ಲೆಯನ್ನು ಮುನ್ನಡೆಸಲಿದ್ದಾರೆ.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಲಯನ್ಸ್ ಕ್ಲಬ್ ಬಂಟ್ವಾಳಕ್ಕೆ ಸಾಲಿನ ಅತ್ಯುತ್ತಮ ಕ್ಲಬ್ ಪ್ರಶಸ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*