ಜಿಲ್ಲಾ ಸುದ್ದಿ

ಬಂಟ್ವಾಳ ಕ್ಷೇತ್ರದ 4 ಗ್ರಾಪಂಗಳ 4815 ಮನೆಗಳಿಗೆ ನಳ್ಳಿ ನೀರು ಸಂಪರ್ಕ ಯೋಜನೆ ಅನುಮೋದನೆ

ಸಚಿವ ಈಶ್ವರಪ್ಪ ನೇತೃತ್ವದ ಸಭೆಯಲ್ಲಿ ಕಾಮಗಾರಿ ಆರಂಭಕ್ಕೆ ಸೂಚನೆ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನ 4 ಗ್ರಾಪಂಗಳ 51 ಜನವಸತಿಗಳ 4815 ಮನೆಗಳಿಗೆ ಕಾರ್ಯಾತ್ಮಕ ನಳ್ಳಿನೀರು ಸಂಪರ್ಕ ಒದಗಿಸುವ ಬಗ್ಗೆ ಕಾರ್ಯಯೋಜನೆ ರೂಪಿಸಲಾಗಿದ್ದು ಇದಕ್ಕೆ ಸಚಿವ ಈಶ್ವರಪ್ಪ ಅನುಮೋದನೆ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ,ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಕುರಿತಾದ ಸಭೆ ಶುಕ್ರವಾರ ನಡೆಯಿತು. ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮೂಡಬಿದಿರೆ ಶಾಸಕರಾದ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ಭಾಗವಹಿಸಿದ್ದು ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಗ್ರಾಮಗಳಾದ ಅಮ್ಮುಂಜೆ ಗ್ರಾಮದ 1215 ಮನೆಗಳಿಗೆ, ಬಡಗಬೆಳ್ಳೂರು ಗ್ರಾಮದ 823 ಮನೆಗಳಿಗೆ, ತೆಂಕಬೆಳ್ಳೂರು ಗ್ರಾಮದ 315 ಮನೆಗಳಿಗೆ,ಕಳ್ಳಿಗೆ ಗ್ರಾಮದ 1273 ಮನೆಗಳಿಗೆ,ಕರಿಯಂಗಳ ಗ್ರಾಮದ 890 ಮನೆಗಳಿಗೆ ಒಟ್ಟು 4 ಗ್ರಾ.ಪಂನ 51 ಜನ ವಸತಿಗಳ 4815 ಮನೆಗಳಿಗೆ ಕಾರ್ಯಾತ್ಮಕ ನಳ ನೀರು ಸಂಪರ್ಕ ಒದಗಿಸುವ ಬಗ್ಗೆ ಕಾರ್ಯಯೋಜನೆ ರೂಪಿಸಲಾಗಿದ್ದು ಸಚಿವರು ಅನುಮೋದನೆ ನೀಡಿ ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳೂರು ಹಾಗೂ ಮೂಡಬಿದಿರೆ ತಾಲೂಕಿನ ಜಲಜೀವನ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಚಿವರು ಅನುಮೋದನೆ ನೀಡಿದರು. ಸಂದರ್ಭ ಗ್ರಾಮೀಣಾಭಿವೃದ್ಧಿ,ಪಂಚಾಯತ್ ರಾಜ್ ಇಲಾಖೆಯ ಸರಕಾರದ ಪ್ರ.ಕಾರ್ಯದರ್ಶಿ ಎಲ್.ಕೆ ಅತಿಕ್, ಗ್ರಾಮೀಣ ಕುಡಿಯುವ ನೀರಿನ ಮತ್ತು ನೈರ್ಮಲ್ಯ ಇಲಾಖೆಯ ಮುಖ್ಯ ಇಂಜಿನೀಯರ್ ಹೊಳೆಯಾಜಿ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts