ವಿಟ್ಲ

ಮಹಿಳೆಯ ಕಟ್ಟಿಹಾಕಿ ದರೋಡೆ ಯತ್ನ – ವಿಟ್ಲ ಮೇಗಿನಪೇಟೆಯಲ್ಲಿ ಘಟನೆ

ಜಾಹೀರಾತು

ಬಂಟ್ವಾಳನ್ಯೂಸ್, ವಿಟ್ಲ ವರದಿ:  ಶುಕ್ರವಾರ ಬೆಳಗಿನ ಜಾವ ನಡೆದ ಆತಂಕಕಾರಿ ಘಟನೆಯಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಪೇಟೆಯಲ್ಲಿ ಒಂಟಿ ಮಹಿಳೆ ಇರುವ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು, ಮಹಿಳೆಗೆ ಹಲ್ಲೆ ನಡೆಸಿ, ಕಟ್ಟಿಹಾಕಿ ದರೋಡೆಗೆ ಯತ್ನಿಸಿದ್ದಾಗಿ ವರದಿಯಾಗಿದೆ. ಮೇಗಿನಪೇಟೆ ನಿವಾಸಿ, ಒಂಟಿಯಾಗಿ ಜೀವನ ನಡೆಸುತ್ತಿರುವ ಲಲಿತಾ ಅವರ ಮನೆಯ ಮುಂಬಾಗಿಲು ಮೂಲಕ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಟ್ಟಿ ಹಾಕಿದ್ದಾರೆ.   ಘಟನಾ ಸ್ಥಳಕ್ಕೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ಮತ್ತು ಸಿಬ್ಬಂದಿ ಭೇಟಿ ನೀಡಿದ್ದು,ತನಿಖೆ ನಡೆಯುತ್ತಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ವಿಟ್ಲ ಠಾಣೆಯಲ್ಲಿ ದರೋಡೆ ಯತ್ನ ಎಂಬ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ