ಗ್ರಾಪಂ ಚುನಾವಣೆ: ಪಕ್ಷ ಬೆಂಬಲಿತರ ವಿಜಯಕ್ಕೆ ಶ್ರಮಿಸಲು ಕಾಂಗ್ರೆಸ್ ಸಿದ್ಧತಾ ಸಭೆಯಲ್ಲಿ ರೈ ಸಲಹೆ

ಜಾಹೀರಾತು

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ  ಸಿದ್ದತೆ ಸಭೆ ಮಾಜಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಹಾಗೂ ಸೂಕ್ಷ್ಮತೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ರೈ ಸಲಹೆ ನೀಡಿ, ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಕೈಗೊಂಡ ಜನಪರ ಯೋಜನೆಗಳು, ಈಗಿನ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯಗಳನ್ನು ಜನರಿಗೆ ಮನದಟ್ಟು ಮಾಡಬೇಕು. ಸವಲತ್ತುಗಳನ್ನು ಒದಗಿಸಿದ ಕಾಂಗ್ರೆಸ್ ಆಡಳಿತದ ಸರ್ಕಾರದಿಂದ ಗ್ರಾಮಗಳು ಇಂದು ಬಲಿಷ್ಠವಾಗಿವೆ ಎಂಬುದನ್ನು ಮನದಟ್ಟು ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿಗಳಾದ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಂಗಳೂರು ಮಹಾನಗರ ಪಾಲಿಕೆಯ ವಿರೋಧಪಕ್ಷದ ನಾಯಕರಾದ ಅಬ್ದುಲ್ ರವೂಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ,  ಜಿಲ್ಲಾಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮಹಮ್ಮದ್, ಮಂಜುಳಾ ಮಾವೆ, ತಾಲೂಕ್ ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ ಶೆಟ್ಟಿ, ಮಹಿಳಾ ಅಧ್ಯಕ್ಷೆ ಜಯಂತಿ ವಿ ಪೂಜಾರಿ, ಬಂಟ್ವಾಳ  ಪುರಸಭಾ ಸದಸ್ಯರು, ಗ್ರಾಮ ಪಂಚಾಯತ್ ಚುನಾವಣೆಯ ಉಸ್ತುವಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರುಗಳು, ವಿವಿಧ ಮುಂಚೂಣಿ ಘಟಕದ ಅದ್ಯಕ್ಷರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗ್ರಾಪಂ ಚುನಾವಣೆ: ಪಕ್ಷ ಬೆಂಬಲಿತರ ವಿಜಯಕ್ಕೆ ಶ್ರಮಿಸಲು ಕಾಂಗ್ರೆಸ್ ಸಿದ್ಧತಾ ಸಭೆಯಲ್ಲಿ ರೈ ಸಲಹೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*