ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ಸಿದ್ದತೆ ಸಭೆ ಮಾಜಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಹಾಗೂ ಸೂಕ್ಷ್ಮತೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ರೈ ಸಲಹೆ ನೀಡಿ, ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಕೈಗೊಂಡ ಜನಪರ ಯೋಜನೆಗಳು, ಈಗಿನ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯಗಳನ್ನು ಜನರಿಗೆ ಮನದಟ್ಟು ಮಾಡಬೇಕು. ಸವಲತ್ತುಗಳನ್ನು ಒದಗಿಸಿದ ಕಾಂಗ್ರೆಸ್ ಆಡಳಿತದ ಸರ್ಕಾರದಿಂದ ಗ್ರಾಮಗಳು ಇಂದು ಬಲಿಷ್ಠವಾಗಿವೆ ಎಂಬುದನ್ನು ಮನದಟ್ಟು ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿಗಳಾದ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಂಗಳೂರು ಮಹಾನಗರ ಪಾಲಿಕೆಯ ವಿರೋಧಪಕ್ಷದ ನಾಯಕರಾದ ಅಬ್ದುಲ್ ರವೂಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮಹಮ್ಮದ್, ಮಂಜುಳಾ ಮಾವೆ, ತಾಲೂಕ್ ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ ಶೆಟ್ಟಿ, ಮಹಿಳಾ ಅಧ್ಯಕ್ಷೆ ಜಯಂತಿ ವಿ ಪೂಜಾರಿ, ಬಂಟ್ವಾಳ ಪುರಸಭಾ ಸದಸ್ಯರು, ಗ್ರಾಮ ಪಂಚಾಯತ್ ಚುನಾವಣೆಯ ಉಸ್ತುವಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರುಗಳು, ವಿವಿಧ ಮುಂಚೂಣಿ ಘಟಕದ ಅದ್ಯಕ್ಷರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…