ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ಎಂಬಲ್ಲಿ ಒಂಟಿ ಮಹಿಳೆಯ ಮನೆಗೆ ದಾಳಿ ನಡೆಸಿ, ಹಲ್ಲೆ ನಡೆಸಿದ ಆರೋಪದಲ್ಲಿ ಉತ್ತರ ಭಾರತದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ತಂಡ ಯಶಸ್ವಿಯಾಗಿದೆ. ಉತ್ತರ ಪ್ರದೇಶದ ಜುಬೈರ್ ಎಂಬಾತನನ್ನು ಅನುಮಾನದ ಮೇಲೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಅ.9ರಂದು ಬೆಳಗ್ಗೆ ವಿಟ್ಲ ಮೇಗಿನಪೇಟೆಯ ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಲಲಿತಾ ಎಂಬಾಕೆ ಮೇಲೆ ಹಲ್ಲೆ ನಡೆಸಿ ದರೋಡೆಗೆ ವಿಫಲ ಯತ್ನ ನಡೆದಿತ್ತು. ಪೊಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ಬಂಟ್ವಾಳ ಸಹಾಯಕ ಅಧೀಕ್ಷಕ ವೆಲೆಂಟನ್ ಡಿಸೋಜ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರ ನೇತೃತ್ವದಲ್ಲಿ ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ರೆಡ್ಡಿ ಹಾಗೂ ಸಿಬ್ಬಂದಿಗಳಾದ ಪ್ರಸನ್ನ, ದಿನೇಶ್, ಜಯಕುಮಾರ್, ಪ್ರತಾಪ, ವಿನಾಯಕ, ಹೇಮರಾಜ್ ಅವರ ತಂಡ ಕಾರ್ಯಚರಣೆಯಲ್ಲಿ ಭಾಗವಹಿಸಿತ್ತು.
Be the first to comment on "ವಿಟ್ಲದಲ್ಲಿ ಮಹಿಳೆಗೆ ಹಲ್ಲೆ, ದರೋಡೆ ಯತ್ನ ಪ್ರಕರಣ – ಎರಡೇ ದಿನಗಳಲ್ಲಿ ಆರೋಪಿಯ ಬಂಧನ"